×
Ad

ಕೊಡಗಿನಲ್ಲಿ ಕೊರೋನ ಸೋಂಕಿತರ ಸಂಖ್ಯೆ 43

Update: 2020-06-28 19:17 IST

ಮಡಿಕೇರಿ, ಜೂ.28: ಕೊಡಗು ಜಿಲ್ಲೆಯಲ್ಲಿ ಕೊರೋನ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ವಿದೇಶದಿಂದ ಬಂದಿರುವ ಇಬ್ಬರು ಸೇರಿದಂತೆ ಕೊಡಗು ಜಿಲ್ಲೆಯಲ್ಲಿ ರವಿವಾರ ಮೂರು ಕೋವಿಡ್ ಸೋಂಕು ಪ್ರಕರಣಗಳು ಪತ್ತೆಯಾಗಿದೆ.

ವಿದೇಶದಿಂದ ಬಂದಿರುವ ವೀರಾಜಪೇಟೆಯ ಮೀನುಪೇಟೆ ನಿವಾಸಿ 41 ವರ್ಷದ ವ್ಯಕ್ತಿಯೊಬ್ಬರಿಗೆ ಸೋಂಕು ದೃಢಪಟ್ಟಿದ್ದು, ಮಡಿಕೇರಿ ತಾಲೂಕು ನಾಪೋಕ್ಲುವಿನ 43 ವರ್ಷದ ವ್ಯಕ್ತಿಯೊಬ್ಬರಲ್ಲೂ ಸೋಂಕು ದೃಢ ಪಟ್ಟಿದೆ. ಈ ಇಬ್ಬರೂ ವಿದೇಶದಿಂದ ಬಂದವರಾಗಿದ್ದಾರೆ.

ಇದರೊಂದಿಗೆ ಕೊಡಗು ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 43 ಕ್ಕೆ ಏರಿಕೆಯಾಗಿದೆ. ಈ ಪೈಕಿ ಮೂವರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 40 ಮಂದಿ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ

20 ನಿಯಂತ್ರಿತ ಪ್ರದೇಶಗಳು
ಜಿಲ್ಲೆಯಲ್ಲಿ ಹೊಸದಾಗಿ ಕುಶಾಲನಗರದ ಅಣ್ಣೇಗೌಡ ಬಡಾವಣೆ ಮತ್ತು ವೀರಾಜಪೇಟೆ ನಗರದ ಮೀನುಪೇಟೆಯನ್ನು ನಿಯಂತ್ರಿತ ಪ್ರದೇಶವನ್ನಾಗಿ ಮಾಡಲಾಗಿದೆ. ಇದರೊಂದಿಗೆ ನಿಯಂತ್ರಿತ ಪ್ರದೇಶಗಳ ಸಂಖ್ಯೆಯೂ 20ಕ್ಕೆ ಏರಿಕೆಯಾದಂತಾಗಿದೆ. ನಾಪೋಕ್ಲುವಿನ ವ್ಯಕ್ತಿ ನೇರವಾಗಿ ಕೋವಿಡ್ ಆಸ್ಪತ್ರೆಗೆ ದಾಖಲಿಸಿರುವುದರಿಂದ ಹೊಸದಾಗಿ ನಿಯಂತ್ರಿತ ಪ್ರದೇಶ ಘೋಷಿಸಿಲ್ಲ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News