​ಮಂಗಳೂರು ಮಹಾನಗರ ಪಾಲಿಕೆಗೆ ಸಾರ್ವಜನಿಕ ಪ್ರವೇಶ ನಿರ್ಬಂಧ

Update: 2020-06-28 14:37 GMT

ಮಂಗಳೂರು, ಜೂ. 28: ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಯ ಪುತ್ರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಒಂದು ವಾರ ಕಾಲ ಪಾಲಿಕೆಗೆ ಸಾರ್ವಜನಿಕ ಪ್ರವೇಶ ನಿಷೇಧಿಸಲಾಗಿದೆ.

ಪಾಲಿಕೆಯ ಅಧಿಯಾರಿಯೊಬ್ಬರ ಪುತ್ರಿ ಗುರುವಾರ ದುಬೈನಿಂದ ಕಣ್ಣೂರು ವಿಮಾನ ನಿಲ್ದಾಣ ಮೂಲಕ ಮನೆಗೆ ಆಗಮಿಸಿದ್ದರು ಎಂದು ತಿಳಿದುಬಂದಿದೆ. ಶುಕ್ರವಾರ ಅವರ ಗಂಟಲು ದ್ರವ ಮಾದರಿಯ ವರದಿ ಪಾಸಿಟಿವ್ ಬಂದಿದೆ. ಶುಕ್ರವಾರ ಪಾಲಿಕೆ ಅಧಿಕಾರಿ ಕರ್ತವ್ಯಕ್ಕೆ ಹಾಜರಾಗಿದ್ದರು ಎಂದು ಮೂಲಗಳು ತಿಳಿಸಿವೆ.

ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪಾಲಿಕೆಯೊಳಗೆ ಜನರ ಪ್ರವೇಶ ನಿಷೇಧಿಸಲಾಗಿದ್ದು, ಜನರ ಅಹವಾಲು ಸ್ವೀಕಾರಕ್ಕೆ ಪಾಲಿಕೆ ಕಟ್ಟಡದ ಹೊರಭಾಗದಲ್ಲಿ ಹೆಲ್ಪ್‌ ಡೆಸ್ಕ್ ರಚಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಬಗ್ಗೆ ‘ವಾರ್ತಾಭಾರತಿ’ ಜೊತೆ ಮಾತನಾಡಿದ ಮನಪಾ ಆಯುಕ್ತ ಅಜಿತ್ ‌ಕುಮಾರ್ ಶಾನಾಡಿ, ‘ಮಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೋನ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆಗೆ ಸಾರ್ವಜನಿಕ ಪ್ರವೇಶ ನಿರ್ಬಂಧ ವಿಧಿಸಲಾಗಿದೆ. ಪಾಲಿಕೆಯ ಕಚೇರಿಯನ್ನು ಸಂಪೂರ್ಣವಾಗಿ ಸ್ಯಾನಿಟೈಝ್ ‌ಗೆ ಒಳಪಡಿಸಲಾಗುತ್ತದೆ. ಈ ಬಗ್ಗೆ ಸೋಮವಾರ ಅಧಿಕೃತ ಆದೇಶ ಹೊರಬೀಳಲಿದೆ’ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News