ಉಡುಪಿ: ಕೊರೋನ ಸೋಂಕಿತ ವ್ಯಕ್ತಿಯ ಸ್ಥಿತಿ ಗಂಭೀರ

Update: 2020-06-28 15:36 GMT

ಉಡುಪಿ, ಜೂ.28: ಉಡುಪಿ ಟಿಎಂಎ ಪೈ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪಡುಬಿದ್ರೆ ಹೆಜಮಾಡಿಯ ಕೊರೋನ ಸೋಂಕಿತರೊಬ್ಬರ ಸ್ಥಿತಿ ಗಂಭೀರವಾಗಿದೆ.

ಕೇರಳ ಕೊಚ್ಚಿಯಿಂದ ಆಗಮಿಸಿದ ಕಾರಣ ಇವರಲ್ಲಿ ಕೊರೋನ ಸೋಂಕು ಕಂಡುಬಂದಿತ್ತು. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಇವರಿಗೆ ವೆಂಟಿಲೇಟರ್ ವ್ಯವಸ್ಥೆ ಕಲ್ಪಿಸಲಾಗಿದೆ. ನಿನ್ನೆಯಿಂದ ಇವರ ಆರೋಗ್ಯದ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News