ಜು.1 : ಪತ್ರಿಕಾ ದಿನಾಚರಣೆ

Update: 2020-06-28 17:00 GMT

ಮಂಗಳೂರು, ಜೂ. 28: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ ಮತ್ತು ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಜು.1ರಂದು ಪೂ. 11ಕ್ಕೆ ನಗರದ ಲೇಡಿಹಿಲ್‌ನ ಪತ್ರಿಕಾ ಭವನದಲ್ಲಿ ನಡೆಯಲಿದೆ.

ಮಂಗಳೂರು ವಿವಿ ಕುಲಸಚಿವ (ಪರೀಕ್ಷಾಂಗ) ಡಾ.ಪಿ.ಎಲ್ ಧರ್ಮ ಕಾರ್ಯಕ್ರಮ ಉದ್ಘಾಟಿಸುವರು. ಹಿರಿಯ ಪತ್ರಕರ್ತ ಸುರೇಶ್ ಬೆಳಗಜೆ ‘ಪತ್ರಕರ್ತ, ಪತ್ರಿಕೋದ್ಯಮ ಮತ್ತು ಪ್ರಸ್ತುತತೆ’ ಬಗ್ಗೆ ಉಪನ್ಯಾಸ ನೀಡುವರು. ಮೆಸ್ಕಾಂನ ಪ್ರಧಾನ ವ್ಯವಸ್ಥಾಪಕ ಎಚ್.ಕೆ.ಕೃಷ್ಣಮೂರ್ತಿ ಸಂಘದ ಎರಡನೇ ವರ್ಷದ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ ಮಾಡಲಿರುವರು.

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು ಮತ್ತು ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಕೆ. ಆನಂದ ಶೆಟ್ಟಿ ಭಾಗವಹಿಸಲಿದ್ದಾರೆ ಎಂದು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಇಬ್ರಾಹಿಂ ಅಡ್ಕಸ್ಥಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News