ಹೋಂ ಕ್ವಾರಂಟೈನ್ ಉಲ್ಲಂಘನೆ: ಎಂಟು ಮಂದಿ ವಿರುದ್ಧ ಎಫ್‍ಐಆರ್ ದಾಖಲು

Update: 2020-06-28 17:35 GMT

ರಾಮನಗರ, ಜೂ.28: ಹೋಂ ಕ್ವಾರಂಟೈನ್ ನಿಯಮಗಳನ್ನು ಉಲ್ಲಂಘಿಸಿ ಹೊರಗೆ ಓಡಾಡುತ್ತಿದ್ದ ಜಿಲ್ಲೆಯ ಎಂಟು ಮಂದಿಯ ಮೇಲೆ ಎಫ್.ಐ.ಆರ್ ದಾಖಲಿಸಲಾಗಿದೆ. ನಿಯಮಗಳನ್ನು ಉಲ್ಲಂಘಿಸಿದ ರಾಮನಗರ ತಾಲೂಕಿನ ಮತ್ತು ಕನಕಪುರ ತಾಲೂಕಿನ ತಲಾ ನಾಲ್ಕು ಮಂದಿಯ ಮೇಲೆ ಸಂಬಂಧಪಟ್ಟ ತಾಲೂಕು ದಂಡಾಧಿಕಾರಿಗಳು ಆಯಾ ತಾಲೂಕು ಆರಕ್ಷಕ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಹೋಂ ಕ್ವಾರಂಟೈನ್‍ನಲ್ಲಿ ಇರಬೇಕಾದವರು ನಿಯಮಗಳನ್ನು ಉಲ್ಲಂಘಿಸಿ ಹೊರಗಡೆ ಓಡಾಡುವುದು ಮತ್ತು ಮನೆಯಲ್ಲಿ ಮೊಬೈಲ್ ಬಿಟ್ಟು ಹೋಗುವುದು ಇಲ್ಲವೇ ಇನ್ನಾರಿಗಾದರೂ ಮೊಬೈಲ್ ಕೊಟ್ಟಂತಹ ಸಂದರ್ಭಗಳಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಹೊರಡಿಸಲಾದ ಮಾದರಿ ಮಾರ್ಗಸೂಚಿಗಳನ್ವಯ ಎಫ್‍ಐಆರ್ ದಾಖಲಿಸಲಾಗುವುದು.

ಜೊತೆಗೆ ನಿಯಮ ಉಲ್ಲಂಘಿಸುವವರನ್ನು ಕಡ್ಡಾಯವಾಗಿ ಸಾಂಸ್ಥಿಕ ಕ್ವಾರಂಟೈನ್‍ಗೆ ಒಳಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಅಧ್ಯಕ್ಷೆ ಎಂ.ಎಸ್.ಅರ್ಚನಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News