×
Ad

ಹಿರಿಯ ಸಾಹಿತಿ ನಾಡೋಜ ಗೀತಾ ನಾಗಭೂಷಣ್ ನಿಧನ

Update: 2020-06-28 23:55 IST

ಕಲಬುರಗಿ, ಜೂ.28: ಹಿರಿಯ ಸಾಹಿತಿ ಗೀತಾ ನಾಗಭೂಷಣ್ (78) ಅವರು ಇಂದು ರಾತ್ರಿ ನಿಧನರಾಗಿದ್ದಾರೆ.

ಅವರು ಕಲಬುರಗಿ ನಗರದ ಸ್ವಸ್ತಿಕ ನಗರದಲ್ಲಿ ವಾಸವಾಗಿದ್ದರು. ಇಂದು ಸಂಜೆ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನ ಖಾಸಗಿ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. 

ಗೀತಾ ನಾಗಭೂಷಣ್ ಅವರು ನಾಡೋಜ ಪ್ರಶಸ್ತಿ ಪಡೆದ ಮೊದಲ ಮಹಿಳಾ ಸಾಹಿತಿ. ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಕರ್ನಾಟಕದ ಮೊದಲ ಮಹಿಳಾ ಸಾಹಿತಿ ಕೂಡಾ ಹೌದು. 2010 ರಲ್ಲಿ ಗದಗ ನಗರದಲ್ಲಿ ನಡೆದ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ಗೀತಾ ನಾಗಭೂಷಣ್ ವಹಿಸಿದ್ದರು. 

ಇವರ ಬದುಕು ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಅಲ್ಲದೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಮೊದಲ ಮಹಿಳಾ ಸಾಹಿತಿ ಎಂಬ ಹೆಗ್ಗಳಿಕೆಯೂ ಗೀತಾ ನಾಗಭೂಷಣ್ ಅವರಿಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News