ಪೆಟ್ರೋಲ್, ಡೀಸೆಲ್ ದರ ಏರಿಕೆಗೆ ವಿರೋಧ : ಸಿದ್ದರಾಮಯ್ಯ ನಿವಾಸದಿಂದ ಸೈಕಲ್ ರ‌್ಯಾಲಿ

Update: 2020-06-29 06:16 GMT

ಬೆಂಗಳೂರು : ಪೆಟ್ರೋಲ್, ಡೀಸೆಲ್ ದರ ಏರಿಕೆ ವಿರೋಧಿಸಿ ಕೆಪಿಸಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯ ಅಂಗವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ನಿವಾಸದಿಂದ ಪಕ್ಷದ ಕಚೇರಿ ವರೆಗೆ ಸೈಕಲ್ ರ್ಯಾಲಿ ನಡೆಸಿದರು.

ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ವಿರೋಧಿಸಿ ಸೈಕಲ್ ಚಳವಳಿ ನಡೆಸಲು ಕೆಪಿಸಿಸಿ ನಾಯಕರು ನಿರ್ಧರಿಸಿದ್ದರು.

ಪ್ರತಿಭಟನೆಯ ಅಂಗವಾಗಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಸೋಮವಾರ ಬೆಳಗ್ಗೆ ತಮ್ಮ ಮನೆಗಳಿಂದ ಪಕ್ಷದ ಕಚೇರಿಗೆ ಸೈಕಲ್‍ನಲ್ಲಿ ರ್ಯಾಲಿ ನಡೆಸಿದರು.

ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಿಂದ ಮೀನ್ಸ್  ಸ್ಕ್ವೆರ್ ವೃತ್ತದಲ್ಲಿರುವ ಆದಾಯ ತೆರಿಗೆ ಕಟ್ಟಡದ ಕಡೆ ಹೊರಟ ಸೈಕಲ್ ರ್ಯಾಲಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್, ಶಾಸಕರು ಹಾಗೂ ಕಾರ್ಯಕರ್ತರು ಭಾಗವಹಿಸಿದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News