ಕೊರೋನ ಮಾರ್ಗಸೂಚಿ ಉಲ್ಲಂಘಿಸಿದ ಕಾಂಗ್ರೆಸ್ ಮುಖಂಡರ ವಿರುದ್ಧ ಎಫ್‍ಐಆರ್: ಗೃಹ ಸಚಿವ ಬೊಮ್ಮಾಯಿ

Update: 2020-06-29 12:22 GMT

ಬೆಂಗಳೂರು, ಜೂ. 29: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆಯ ವೇಳೆ ಕೊರೋನ ಸೋಂಕಿಗೆ ಸಂಬಂಧಿಸಿದ ಮಾರ್ಗಸೂಚಿಯನ್ನು ಉಲ್ಲಂಘಿಸಿದ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ವಿರುದ್ಧ ಎಫ್‍ಐಆರ್ ದಾಖಲಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಇಂದಿಲ್ಲಿ ತಿಳಿಸಿದ್ದಾರೆ.

ಸೋಮವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪ್ರತಿಭಟನೆ ವೇಳೆ ವ್ಯಕ್ತಿಗತ ಅಂತರ ಕಾಯ್ದುಕೊಂಡಿಲ್ಲ. ಯಾವುದೇ ಸೂಕ್ತ ಮುನ್ನಚ್ಚರಿಕೆಯನ್ನು ವಹಿಸಿಲ್ಲ. ಪ್ರತಿಭಟನೆಗೆ ಅನುಮತಿ ಕೋರಿದ ವೇಳೆ ಕೊರೋನ ಸೋಂಕಿನ ಮಾರ್ಗಸೂಚಿ ಪಾಲಿಸುವ ಭರವಸೆ ನೀಡಿದ್ದರು. ಆದರೆ, ಪ್ರತಿಭಟನೆಗೆ ಪೊಲೀಸರು ಅನುಮತಿ ನೀಡಿರಲಿಲ್ಲ. ಅಲ್ಲದೆ, ಮಾರ್ಗಸೂಚಿಯನ್ನು ಉಲ್ಲಂಘಿಸಿದ್ದಾರೆ ಎಂದು ಬೊಮ್ಮಾಯಿ ದೂರಿದರು.

ಸೋಂಕಿನ ಗಂಭೀರ ಪರಿಸ್ಥಿತಿಯಲ್ಲಿ ಪ್ರತಿಭಟನೆ ನಡೆಸುವ ಅಗತ್ಯವಿರಲಿಲ್ಲ. ಆದರೆ, ಪ್ರತಿಭಟನೆಯ ವೇಳೆ ಮಾರ್ಗಸೂಚಿ ಪಾಲಿಸದ ಹಿನ್ನೆಲೆಯಲ್ಲಿ ಎನ್‍ಡಿಆರ್‍ಎಫ್-2020 ಕಾಯ್ದೆ ಉಲ್ಲಂಘಿಸಿದ್ದು, ಕೂಡಲೇ ಆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಲು ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳು ಕ್ರಮ ವಹಿಸಲಿದ್ದಾರೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News