ಬೆಂಗಳೂರು: ಸತತ ಮೂರನೇ ದಿನ 500ಕ್ಕೂ ಹೆಚ್ಚು ಕೊರೋನ ಪಾಸಿಟಿವ್

Update: 2020-06-29 17:10 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಜೂ.29: ನಗರದಲ್ಲಿ ಕೊರೋನ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಸೋಮವಾರ ಒಂದೇ ದಿನ ಹೊಸದಾಗಿ 738 ಸೋಂಕಿತರು ಪತ್ತೆಯಾಗಿದ್ದಾರೆ. ಇನ್ನು ನಗರದಲ್ಲಿ ಸತತ ಮೂರನೇ ದಿನವೂ ಸೋಂಕಿತರ ಸಂಖ್ಯೆ 500ರ ಗಡಿದಾಟಿದೆ.

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 4,052 ಕೊರೋನ ಪ್ರಕರಣ ಪತ್ತೆಯಾಗಿದ್ದು, 178 ಜನರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಮವಾರ ನಾಲ್ವರು ಸೋಂಕಿಗೆ ಬಲಿಯಾಗಿದ್ದು, 3,427 ಜನರು ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಗರದಲ್ಲಿ ಇದುವರೆಗೆ 91 ಜನರು ಸೋಂಕಿಗೆ ಬಲಿಯಾಗಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿರುವ 31 ಜ್ವರ ಚಿಕಿತ್ಸಾಲಯಲ್ಲಿ ಒಟ್ಟು 17,148 ವ್ಯಕ್ತಿಗಳಿಗೆ ತಪಾಸಣೆ ಮಾಡಲಾಗಿದೆ. ಸತತ ಎರಡನೇ ದಿನವು ಯಾವುದೇ ಒಬ್ಬ ವ್ಯಕ್ತಿಯೂ ಗುಣಮುಖರಾಗಿ ಬಿಡುಗಡೆಯಾಗಿಲ್ಲ. 

5.99 ಲಕ್ಷ ದಂಡ

ಸುರಕ್ಷಿತ ಅಂತರ ಹಾಗೂ ಮಾಸ್ಕ್ ಧರಿಸದೆ ಇರುವವರಿಂದ ಬಿಬಿಎಂಪಿ ಒಟ್ಟು  5.99 ಲಕ್ಷ ರೂ. ದಂಡ ಸಂಗ್ರಹಿಸಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಸುರಕ್ಷಿತ ಅಂತರ ಕಾಯ್ದುಕೊಳ್ಳದ ಮಾಸ್ಕ್ ಧರಿಸದೇ ಸಾರ್ವಜನಿಕ ಸ್ಥಳಗಳಲ್ಲಿ ಅಡ್ಡಾಡುವವರಿಂದ ಮಾರ್ಷಲ್‍ಗಳು ದಂಡ ಸಂಗ್ರಹಿಸುತ್ತಿದ್ದು, ಸೋಮವಾರ ಮಾಸ್ಕ್ ಧರಿಸದ 2,733 ಹಾಗೂ ಸುರಕ್ಷಿತ ಅಂತರ ಕಾಯ್ದುಕೊಳ್ಳದ 264 ಮಂದಿ ಸೇರಿದಂತೆ 2,997 ಮಂದಿಯಿಂದ ಒಟ್ಟು 5.99 ಲಕ್ಷ ರೂ. ದಂಡ ಸಂಗ್ರಹಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News