ಅಂದು ಪ್ರತಿಭಟನೆ ಮಾಡುತ್ತಿದ್ದವರು ಇಂದು ಎಲ್ಲಿದ್ದಾರೆ: ರಮಾನಾಥ ರೈ ಪ್ರಶ್ನೆ

Update: 2020-06-29 17:25 GMT

ಬಂಟ್ವಾಳ, ಜೂ. 29: ಪಾಣೆಮಂಗಳೂರು, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಇಂಧನ ಬೆಲೆ ಏರಿಕೆಯನ್ನು ವಿರೋಧಿಸಿ ಕೇಂದ್ರ ಸರಕಾರದ ವಿರುದ್ಧ ಸೋಮವಾರ ಪ್ರತಿಭಟನಾ ಸಭೆ ಮತ್ತು ಜಾಥಾ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ರಮಾನಾಥ ರೈ, ಇಂಧನ ಸಹಿತ ದಿನ ಬಳಕೆಯ ಅಗತ್ಯ ವಸ್ತುಗಳ ಬೆಲೆಯನ್ನು ಏರಿಕೆ ಮಾಡುವ ಮೂಲಕ ಕೇಂದ್ರ ಸರಕಾರ ಬಡವರ ಜೀವನವನ್ನು ಇನ್ನಷ್ಟು ಹೊರೆ ಮಾಡುತ್ತಿದೆ. ಯುಪಿಎ ಸರಕಾರದ ಅವಧಿಯಲ್ಲಿ ಇಂಧನ ಬೆಲೆ ಏರಿಕೆಯಾದಾಗ ಪ್ರತಿಭಟನೆ, ಭಾರತ್ ಬಂದ್ ಗೆ ಕರೆ ನೀಡುತ್ತಿದ್ದವರು ಈಗ ಎಲ್ಲಿದ್ದಾರೆ ಎಂದು ಪ್ರಶ್ನಿಸಿದರು.

ಪಾದಯಾತ್ರೆ ಸಂದರ್ಭ ಬೆಲೆ ಏರಿಕೆಯನ್ನು ಖಂಡಿಸಿ ಜೀಪಿಗೆ ಹಗ್ಗ ಕಟ್ಟಿ ಏಳೆಯಲಾಯಿತು. ಬಳಿಕ ತಹಶೀಲ್ದಾರ್ ಮೂಲಕ ಬೆಲೆ ಇಳಿಕೆಗೆ ಆಗ್ರಹಿಸಿ ಸರಕಾರಕ್ಕೆ ಮನವಿ ನೀಡಲಾಯಿತು.

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಮಾಣಿ, ಜಿಪಂ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಬಿ.ಪದ್ಮಶೇಖರ ಜೈನ್, ಎಂ.ಎಸ್.ಮುಹಮ್ಮದ್, ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ಪೂಜಾರಿ, ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ, ಪ್ರಮುಖರಾದ ಸುದರ್ಶನ ಜೈನ್, ಪದ್ಮನಾಭ ರೈ, ಸದಾಶಿವ ಬಂಗೇರ, ಚಿತ್ತರಂಜನ್ ಶೆಟ್ಟಿ ಬೊಂಡಾಲ, ಸಂಜೀವ ಪೂಜಾರಿ, ಯೂಸುಫ್ ಕರಂದಾಡಿ, ಹಸೈನಾರ್, ಲುಕ್ಮಾನ್, ಸಿದ್ದೀಕ್ ಗುಡ್ಡೆಯಂಗಡಿ, ಮಹಮ್ಮದ್ ನಂದರಬೆಟ್ಟು, ಮಹಮ್ಮದ್ ನಂದಾವರ, ಲೋಲಾಕ್ಷ, ಗಂಗಾಧರ ಪೂಜಾರಿ, ವೆಂಕಪ್ಪ ಪೂಜಾರಿ, ಡೆನ್ಝಿಲ್ ನೊರೊನ್ಹಾ, ಮೆಲ್ವಿನ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News