ಭೂ ಸುಗ್ರೀವಾಜ್ಞೆ ವಿರೋಧಿಸಿ ಪ್ರತಿಭಟನೆ: ರೈತ ಮುಖಂಡರು, ಸಚಿವ ಮಾಧುಸ್ವಾಮಿ ನಡುವೆ ಮಾತಿನ ಚಕಮಕಿ

Update: 2020-06-29 18:23 GMT

ತುಮಕೂರು, ಜೂ.29: ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತ ಮುಖಂರು ಮತ್ತು ಸಚಿವ ಜೆ.ಸಿ.ಮಾಧುಸ್ವಾಮಿ ನಡುವೆ ಮಾತಿನ ಚಮಕಿ ನಡೆದಿದೆ ಎಂದು ವರದಿಯಾಗಿದೆ.

ರೈತರ ಮನವಿ ಸ್ವೀಕರಿಸಲು ಅಗಮಿಸಿದ್ದ ಸರಕಾರದಿಂದ ರೈತರಿಗೆ ಅನ್ಯಾಯವಾಗುತ್ತಿದೆ ಎಂಬ ರೈತ ಮುಖಂಡರ ಪ್ರಶ್ನೆಗೆ ಸಚಿವರು ಕೆರಳಿದರು. ರೈತ ಮುಖಂಡರ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಸಚಿವರು ಹೋಗಿ ಕಾರಿನಲ್ಲಿ ಕುಳಿತರು. ರೈತರ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲದಿದ್ದರೆ ಹೋರಾಟ ತೀವ್ರಗೊಳಿಸುತ್ತೇವೆ ಎಂದು ಪಟ್ಟು ಹಿಡಿದು ಕುಳಿತ ರೈತ ಮುಖಂಡರ ವಿರುದ್ಧ ಸಚಿವರು ಸಿಡಿಮಿಡಿಗೊಂಡರು. ಆಗ ಮಾತಿಗೆ ಮಾತು ಬೆಳೆಯಿತು. ಪ್ರತಿಭಟನಾನಿರತ ರೈತರು ಸಚಿವರ ವಿರುದ್ಧ ಘೋಷಣೆ ಕೂಗಿದರು. ಒಂದು ಹಂತದಲ್ಲಿ ಪ್ರತಿಭಟನಾರರು ಸಚಿವರ ವಿರುದ್ಧ ಧಿಕ್ಕಾರ ಕೂಗುತ್ತಿದ್ದಂತೆಯೇ ಸಚಿವರು ಹೊರಟು ಹೋದರು.

ಯಾವುದೇ ತಿದ್ದುಪಡಿ ಅಥವಾ ಕಾಯ್ದೆ ರೂಪಿಸಲು ಸಾರ್ವಜನಿಕರ ಒಳಿತು ಅದರಲ್ಲಿ ಅಡಕವಾಗಿರಬೇಕು. ಅದನ್ನು ಜನಸಮುದಾಯ ಒಪ್ಪುವಂತಿರಬೇಕು, ಅದು ಸಮರ್ಥನೀಯವಾಗಿರಬೇಕು. ಅಂತಹ ಕಾಯ್ದೆ ಅಥವಾ ತಿದ್ದುಪಡಿ ಅಧಿವೇಶನದಲ್ಲಿ ಚರ್ಚೆಯಾಗಬೇಕು. ಇಂತಹ ಚರ್ಚೆಗೆ ಅವಕಾಶ ನೀಡದೆ ತಿದ್ದುಪಡಿಗೆ ಮುಂದಾಗಿರುವ ಭೂಸುಧಾರಣಾ ಕಾಯ್ದೆ ಬಾಲಿಶವಾಗಿರುತ್ತವೆ ಎಂದು ಪ್ರತಿಭಟನಾಕಾರರು ದೂರಿದರು.

ಜಿಲ್ಲಾಧಿಾರಿ ಕಚೇರಿ ಎದುರು ರಾಜ್ಯ ರೈತ ಸಂಘ, ಹಸಿರು ಸೇನೆ, ಕರ್ನಾಟಕ ಪ್ರಾಂತ ರೈತ ಸಂಘ, ಎಐಕೆಎಸ್ ಸಿಸಿ, ಎಐಕೆಎಸ್, ದಲಿತ ಸಂಘರ್ಷ ಸಮಿತಿಗಳು ನಡೆಸುತ್ತಿದ್ದ ಪ್ರತಿಭಟನೆ ಸ್ಥಳಕ್ಕೆ ಆಗಮಿಸಿದ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ರೈತ ಮುಖಂಡ ಅಹವಾಲುಗಳನ್ನು ಆಲಿಸಿ ಮನವಿ ಸ್ವೀಕರಿಸಿದರು. ಇದೇ ವೇಳೆ ಸಂಸದ ಬಸವರಾಜು ಅವರಿೂ ಮನವಿ ಸಲ್ಲಿಸಾಯಿತು. ಪಾರ್ಲಿಮೆಂಟ್ ನಲ್ಲಿ ಚರ್ಚಿಸುತ್ತೇನೆ. ಪ್ರಧಾನಿಗಳ ಗಮನ ಸೆಳೆಯುತ್ತೇನೆ ಎಂದು ರೈತ ಮುಖಂಡರಿಗೆ ಭರವಸೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News