ವಿಶಾಖಪಟ್ಟಣದಲ್ಲಿ ಮತ್ತೊಂದು ವಿಷಾನಿಲ ದುರಂತ: ಇಬ್ಬರು ಸಾವು

Update: 2020-06-30 06:41 GMT

ವಿಶಾಖಪಟ್ಟಣ, ಜೂ.30: ವಿಶಾಖಪಟ್ಟಣದಲ್ಲಿ ಮಂಗಳವಾರ ಬೆಳಗ್ಗೆ ಔಷಧ ಉತ್ಪಾದನಾ ಕಂಪೆನಿಯಲ್ಲಿ ಬೆಂಜಿಮಿಡಾಜೋಲ್ ಎಂಬ ವಿಷಾನಿಲ ಸೋರಿಕೆಯಾಗಿದ್ದು, ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಸಾವಿಗೀಡಾಗಿದ್ದಾರೆ. ತೀವ್ರ ಅಸ್ವಸ್ಥರಾಗಿದ್ದ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಂಧ್ರಪ್ರದೇಶದಲ್ಲಿ ಕಳೆದ ಎರಡು ತಿಂಗಳ ಅಂತರದಲ್ಲಿ ಗ್ಯಾಸ್ ಸೋರಿಕೆಯಿಂದಾಗಿ ಜನರು ಸಾವನ್ನಪ್ಪಿರುವ ಮೂರನೇ ಘಟನೆ ಇದಾಗಿದೆ.

ಪರ್ವಾಡದ ಫಾರ್ಮಾ ಸಿಟಿಯೊಳಗೆ ಇರುವ ಸೈನರ್ ಲೈಫ್ ಸೈನ್ಸಸ್‌ನಲ್ಲಿ ಈ ಘಟನೆ ನಡೆದಿದ್ದು, ಘಟನೆಯ ವೇಳೆ 30ರಿಂದ 35 ಜನರು ಕೆಲಸ ಮಾಡುತ್ತಿದ್ದರು. ರಿಯಾಕ್ಟರ್ ಸಮೀಪ ಅನಿಲ ಸೋರಿಕೆಯಾಗಿದ್ದು, ಇಲ್ಲಿ ಕೆಲಸ ಮಾಡುತ್ತಿದ್ದ ಆರು ಮಂದಿ ಅಸ್ವಸ್ಥರಾಗಿದ್ದಾರೆ. ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದ ನಾಲ್ವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಮುಖ್ಯಮಂತ್ರಿ ವೈಎಸ್ ಜಗನ್‌ಮೋಹನ್ ರೆಡ್ಡಿ ಘಟನೆಯ ಕುರಿತು ಜಿಲ್ಲಾಧಿಕಾರಿ ವಿನಯಚಂದ್‌ರಿಂದ ವಿವರ ಪಡೆದಿದ್ದಾರೆ. ಮುನ್ನಚ್ಚರಿಕಾ ಕ್ರಮವಾಗಿ ತಕ್ಷಣವೇ ಕಾರ್ಖಾನೆಯನ್ನು ಮುಚ್ಚುವಂತೆ ಆದೇಶಿಸಿದ್ದಾರೆ.

ಟಿಡಿಪಿ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಘಟನೆಯಲ್ಲಿ ತಮ್ಮವರನ್ನು ಕಳೆದುಕೊಂಡಿರುವ ಕುಟುಂಬಗಳಿಗೆ ಸಾಂತ್ವಾನ ಹೇಳಿದ್ದಾರೆ.

ಮೇ 7ರಂದು ಜಿಲ್ಲೆಯ ಎಲ್‌ಜಿ ಪಾಲಿಮರ್ಸ್ ಕಾರ್ಖಾನೆಯಲ್ಲಿ ನಡೆದಿದ್ದ ವಿಷಾನಿಲ ದುರಂತದಲ್ಲಿ 10 ಜನರು ಮೃತಪಟ್ಟಿದ್ದರು. ಎರಡು ದಿನಗಳ ಹಿಂದೆ ಕರ್ನೂಲ್ ಜಿಲ್ಲೆಯ ನಂದಯಲದಲ್ಲಿ ಎಸ್‌ಪಿವೈ ಆಗ್ರೋ ಇಂಡಸ್ಟ್ರಿಯಲ್ಲಿ ಅಮೋನಿಯಾ ಸೇವಿಸಿ ವ್ಯಕ್ತಿಯೊಬ್ಬ ಉಸಿರಾಟದ ಸಮಸ್ಯೆಯಿಂದ ಮೃತಪಟ್ಟಿದ್ದ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News