ಉಡುಪಿ ಜಿಲ್ಲೆಯಲ್ಲಿ ಬಿರುಸಿನ ಮಳೆ

Update: 2020-06-30 16:45 GMT

ಉಡುಪಿ, ಜೂ.30: ಕಳೆದ 24 ಗಂಟೆಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ಬಿರುಸಿನ ಮಳೆ ಸುರಿಯುತ್ತಿದೆ. ಇಂದು ಬೆಳಗ್ಗೆ 8:30ಕ್ಕೆ ಮುಕ್ತಾಯಗೊಂಡಂತೆ ಹಿಂದಿನ 24 ಗಂಟೆಗಳಲ್ಲಿ ಉಡುಪಿ ಜಿಲ್ಲೆಯಲ್ಲಿ 55ಮಿ.ಮೀ. ಮಳೆಯಾಗಿರುವ ಬಗ್ಗೆ ಮಾಹಿತಿ ಇದೆ.

ಉಡುಪಿಯಲ್ಲಿ 68 ಮಿ.ಮೀ, ಕುಂದಾಪುರದಲ್ಲಿ 38 ಹಾಗೂ ಕಾರ್ಕಳದಲ್ಲಿ 70ಮಿ.ಮೀ. ಮಳೆಯಾಗಿದೆ. ಬೈಂದೂರು ತಾಲೂಕಿನ ನಾವುಂದ ಗ್ರಾಮದ ಸೂರ ಮೊಗವೀರ ಎಂಬವರ ವಾಸ್ತವ್ಯದ ಪಕ್ಕಾ ಮನೆ ಗಾಳಿ-ಮಳೆಯಿಂದ ಭಾಗಶ: ಹಾನಿಯಾಗಿದ್ದು 75,000ರೂ. ನಷ್ಟ ಸಂಭವಿಸಿದೆ ಎಂದು ವರದಿಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News