ಭಟ್ಕಳ: ನವ ವಿವಾಹಿತ ಮೃತ್ಯು

Update: 2020-06-30 16:55 GMT

ಭಟ್ಕಳ: ನವವಿವಾಹಿತ ಯುವಕನೊಬ್ಬ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ಬೆಳಗ್ಗೆ ಮೃತಪಟ್ಟ ಬಗ್ಗೆ ವರದಿಯಾಗಿದೆ. ಸಾವಿಗೆ ನಿಖರವಾದ ಕಾರಣ ಸ್ಪಷ್ಟವಾಗದಿದ್ದು, ಮೃತ ಯುವಕ ಕೆಲದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಎಂದು ಹೇಳಲಾಗುತ್ತಿದೆ.

ಮೃತರು ಇಲ್ಲಿನ ಅಝಾದ್ ನಗರ ನಿವಾಸಿಯಾಗಿದ್ದು, ಬೆಂಗಳೂರಿನಲ್ಲಿ ಉದ್ಯೋಗಿಯಾಗಿದ್ದ. ಜೂ. 25ರಂದು ಮದುವೆ ನಡೆದಿದ್ದು, ನಿನ್ನೆ ಚಿಕಿತ್ಸೆಗಾಗಿ ಮಂಗಳೂರಿಗೆ ತೆರಳಿದ್ದು, ಇಂದು ಬೆಳಗ್ಗೆ ಎಂಟು ಗಂಟೆ ಸುಮಾರಿಗೆ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಮೃತ ವ್ಯಕ್ತಿಯ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದ್ದು. ವರದಿ ಬಂದ ಮೇಲೆ ಸಾವಿನ ಬಗ್ಗೆ ತಿಳಿದು ಬರಬೇಕಿದೆ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News