ಬೆಂಗಳೂರು: ನಗರದಲ್ಲಿ 503 ಹೊಸ ಕೊರೋನ ಪ್ರಕರಣ ದೃಢ; ಮೂವರು ಮೃತ್ಯು

Update: 2020-06-30 16:58 GMT

ಬೆಂಗಳೂರು, ಜೂ.30: ಇನ್ನು ನಗರದಲ್ಲಿ ಸತತ ನಾಲ್ಕನೇ ದಿನವೂ ಕೊರೋನ ಸೋಂಕಿತರ ಸಂಖ್ಯೆ 500ರ ಗಡಿದಾಟಿದ್ದು, ಮಂಗಳವಾರ ಹೊಸದಾಗಿ 503 ಪ್ರಕರಣ ದೃಢಪಟ್ಟಿದ್ದು, ಮೂವರು ಮೃತರಾಗಿದ್ದಾರೆ.

ನಗರದಲ್ಲಿ ಇಲ್ಲಿಯವರೆಗೆ ಸೋಂಕಿತರ ಸಂಖ್ಯೆ 4,555 ಏರಿಕೆಯಾಗಿದ್ದು, 171 ಜನರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ 31 ಜ್ವರ ಚಿಕಿತ್ಸಾಲಯಲ್ಲಿ ಒಟ್ಟು 1,7491 ವ್ಯಕ್ತಿಗಳಿಗೆ ತಪಾಸಣೆ ಮಾಡಲಾಗಿದೆ.

ಮಂಗಳವಾರ 10 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು, ನಗರದಲ್ಲಿ ಇನ್ನು 3,916 ಜನರು ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಲ್ಲಿಯವರೆಗೆ 95 ಜನರು ಸೋಂಕಿಗೆ ಬಲಿಯಾಗಿದ್ದಾರೆ. 

6.46 ಲಕ್ಷ ರೂ. ದಂಡ ವಸೂಲಿ
ಸುರಕ್ಷಿತ ಅಂತರ ಹಾಗೂ ಮಾಸ್ಕ್ ಧರಿಸದೆ ಇರುವವರಿಂದ ಬಿಬಿಎಂಪಿ ಒಟ್ಟು 6.46 ಲಕ್ಷ ರೂ. ದಂಡ ಸಂಗ್ರಹಿಸಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಸುರಕ್ಷಿತ ಅಂತರ ಕಾಯ್ದುಕೊಳ್ಳದೆ ಮಾಸ್ಕ್ ಧರಿಸದೇ ಸಾರ್ವಜನಿಕ ಸ್ಥಳಗಳಲ್ಲಿ ಅಡ್ಡಾಡುವವರಿಂದ ಮಾರ್ಷಲ್‍ಗಳು ದಂಡ ಸಂಗ್ರಹಿಸುತ್ತಿದ್ದು, ಮಂಗಳವಾರ ಮಾಸ್ಕ್ ಧರಿಸದ 2,893 ಹಾಗೂ ಸುರಕ್ಷಿತ ಅಂತರ ಕಾಯ್ದುಕೊಳ್ಳದ 339 ಮಂದಿ ಸೇರಿದಂತೆ 3,232 ಮಂದಿಯಿಂದ ಒಟ್ಟು 6.46 ಲಕ್ಷ ರೂ. ದಂಡ ಸಂಗ್ರಹಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News