ಕಸಾಪದಿಂದ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ

Update: 2020-06-30 18:23 GMT

ಬೆಂಗಳೂರು, ಜೂ.30: ಕನ್ನಡ ಸಾಹಿತ್ಯ ಪರಿಷತ್ತು 2020-21ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. 

2020ರ ಡಿಸೆಂಬರ್ ಕೊನೆಯ ವಾರದಲ್ಲಿ ನಡೆಯುವ ಪರೀಕ್ಷೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆ.31 ಕೊನೆಯ ದಿನಾಂಕವಾಗಿದ್ದು, ಸೆಪ್ಟೆಂಬರ್ 15ರವರೆಗೆ ದಂಡ ಶುಲ್ಕ ರೂ. 50ಅನ್ನು ಹೆಚ್ಚುವರಿಯಾಗಿ ನೀಡಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ 25 ರೂ. ಪಾವತಿಸಿ ಪರೀಕ್ಷಾ ನಿಯಮಾವಳಿ ಹಾಗೂ ಅರ್ಜಿಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಮಾರಾಟ ಮಳಿಗೆಯಲ್ಲಿ(ಬೆಂಗಳೂರು) ಜು.1 ರಿಂದ ಪಡೆಯಬಹುದಾಗಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ಹೆಸರಿಗೆ ಮೂವತ್ತು ರೂಪಾಯಿ ಮನಿಯಾರ್ಡರ್ ಮಾಡಿದರೆ ಅರ್ಜಿಯನ್ನು ಅಂಚೆ ಮೂಲಕ ಕಳುಹಿಸಲಾಗುವುದು.

ಪರೀಕ್ಷಾ ಅರ್ಜಿಗಳನ್ನು ಅಂತರ್ಜಾಲ ತಾಣ www.kasapa.in ಮೂಲಕ ಸಹ ಪಡೆದುಕೊಳ್ಳಬಹುದು. ಇವರು ಪರೀಕ್ಷಾ ಶುಲ್ಕದೊಂದಿಗೆ ಅರ್ಜಿ ಶುಲ್ಕ ರೂ.25ಗಳನ್ನು ಪ್ರತ್ಯೇಕವಾಗಿ ಪಾವತಿಸಬೇಕಾಗಿದೆ. ಹೆಚ್ಚಿನ ವಿವರಗಳಿಗೆ ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು-18, ದೂರವಾಣಿ ಸಂಖ್ಯೆ 080-26623584 ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News