×
Ad

ಉಡುಪಿ ಜಿಲ್ಲೆಯ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನ ಪಾಸಿಟಿವ್

Update: 2020-07-01 11:49 IST

ಉಡುಪಿಯಲ್ಲಿ ಮತ್ತೊಂದು ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನ ಪಾಸಿಟಿವ್ ಬಂದಿರುವ ಬಗ್ಗೆ ದೃಢಪಟ್ಟಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಮೂವರು ವಿದ್ಯಾರ್ಥಿಗಳಲ್ಲಿ ಸೊಂಕು ಪತ್ತೆಯಾಗಿದೆ.

ಈಕೆ ಈಗಾಗಲೇ ಮೂರು ಪರೀಕ್ಷೆಗಳನ್ನು ಬರೆದಿದ್ದು, ಆದರೆ ನಿನ್ನೆ ರಾತ್ರಿ ಈಕೆಯ ಕೊರೋನ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಮುಂದಿನ ಪರೀಕ್ಷೆ ಬರೆಯುವ ಅವಕಾಶದಿಂದ ವಂಚಿತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಬೈಂದೂರಿನ ಕೇಂದ್ರದಲ್ಲಿ ಪರೀಕ್ಷೆ ಬರೆದಿರುವ ಈಕೆ, ತೀವ್ರ ಅಸ್ವಸ್ಥರಾದ ಕಾರಣ ಜೂ.30ರಂದು ಈಕೆಯನ್ನು ಕೊರೋನ ಪರೀಕ್ಷೆಗೆ ಒಳಪಡಿಸಲಾಗಿತ್ತು. ಮುಂಬೈಯಿಂದ ಬಂದವರಿಂದ ಈಕೆಗೆ ಕೊರೋನ ಬಂದಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಆದರೆ ಈವರೆಗೆ ಯಾವ ರೀತಿ ಬಂದಿದೆ ಎಂಬುದು ದೃಢಪಟ್ಟಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News