ಗೋವಾದ ಬಿಜೆಪಿ ಶಾಸಕನಿಗೆ ಕೋವಿಡ್-19

Update: 2020-07-01 06:24 GMT

ಪಣಜಿ, ಜು.1: ಗೋವಾದ ಬಿಜೆಪಿ ಶಾಸಕರೊಬ್ಬರಿಗೆ ಕೋವಿಡ್-19 ಸೋಂಕು ತಗಲಿದೆ ಎಂದು ರಾಜ್ಯದ ಹಿರಿಯ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಶಾಸಕರನ್ನು ಮಾರ್ಗೊವಾದಲ್ಲಿರುವ ಇಎಸ್‌ಐ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊರೋನ ವೈರಸ್ ಸೋಂಕು ತಗಲಿರುವುದು ಮಂಗಳವಾರ ನಡೆಸಲಾಗಿರುವ ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿತ್ತು.

 ಕಳೆದ ತಿಂಗಳು ಮಾಜಿ ಆರೋಗ್ಯ ಸಚಿವರಿಗೆ ಕೋವಿಡ್-19ರೋಗ ತಗಲಿದ್ದು, ಇಎಸ್‌ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News