ಮಂಗಳೂರು: ಎಸಿಪಿಗೆ ಕೊರೋನ ಪಾಸಿಟಿವ್

Update: 2020-07-01 09:28 GMT

ಮಂಗಳೂರು, ಜು.1: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಎಸಿಪಿಯೊಬ್ಬರಿಗೆ ಕೊರೋನ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. 

ಇತ್ತೀಚೆಗೆ ಕೊರೋನದಿಂದ ಮೃತಪಟ್ಟವರೋರ್ವರ ಅಂತ್ಯಸಂಸ್ಕಾರಕ್ಕೆ ಬೋಳಾರದಲ್ಲಿ ಸ್ಥಳೀಯರಿಂದ ವಿರೋಧ ವ್ಯಕ್ತವಾಗಿತ್ತು. ಈ ಸಂದರ್ಭ ಪೊಲೀಸರು ಸಹಿತ ಹಲವು ಅಧಿಕಾರಿಗಳು ಸ್ಥಳಕ್ಕೆ ತೆರಳಿ ಮನವೊಲಿಸಿದ್ದರು. ನಂತರ ಅಂತ್ಯಸಂಸ್ಕಾರ ನೆರವೇರಿತ್ತು. ಅಂತ್ಯಸಂಸ್ಕಾರದ ಬಂದೋಬಸ್ತ್‌ ನಲ್ಲಿ ಎಸಿಪಿಯವರು ಭಾಗವಹಿಸಿದ್ದರು. ಆ ಸಂದರ್ಭದಲ್ಲಿ ಎಸಿಪಿಯವರಿಗೆ ಸೋಂಕು ತಗುಲಿರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News