ಯಾದಗಿರಿ: ಕೊರೋನದಿಂದ ಮೃತಪಟ್ಟ ವ್ಯಕ್ತಿಯ ಶವ ಎಳೆದೊಯ್ದು ಅಂತ್ಯಸಂಸ್ಕಾರ

Update: 2020-07-01 17:09 GMT

ಯಾದಗಿರಿ, ಜು. 1: ಕೊರೋನ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಮೃತದೇಹವನ್ನು ಎಳೆದೊಯ್ದು ಅಂತಿಮ ಸಂಸ್ಕಾರ ನಡೆಸಿರುವ ಅಮಾನವೀಯ ಘಟನೆ ಜಿಲ್ಲೆಯ ಹೊನಗೇರಾ ಗ್ರಾಮದಲ್ಲಿ ಮಂಗಳವಾರ ಈ ಘಟನೆ ನಡೆದಿರುವುದಾಗಿ ವರದಿಯಾಗಿದೆ.

ಕೋವಿಡ್ ಸೋಂಕಿತ ವ್ಯಕ್ತಿಯ ಮೃತದೇಹವನ್ನು ಆರೋಗ್ಯ ಇಲಾಖೆ ಸಿಬ್ಬಂದಿಯು ಆ್ಯಂಬುಲೆನ್ಸ್‌ನಿಂದ ಎಳೆದುತಂದು ಗುಂಡಿಗೆ ಎಸೆದಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ ಎನ್ನಲಾದ ವೀಡಿಯೊಂದು ಸಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿದ್ದು, ಬಳ್ಳಾರಿ, ದಾವಣಗೆರೆ ಬಳಿಕ ಯಾದಗಿರಿಯಲ್ಲೂ ಈ ಅಮಾನವೀಯ ಪ್ರಕರಣ ಬೆಳಕಿಗೆ ಬಂದಿದೆ.

ರಾಯಚೂರಿನ ಸಿರವಾರದಲ್ಲಿ ಕೊರೋನ ಸೋಂಕಿತ ವ್ಯಕ್ತಿ ಮಗಳ ಮದುವೆ ಮರುದಿನವೇ ಮೃತಪಟ್ಟಿದ್ದರು. ಮೃತರ ಮರಣೋತ್ತರ ಪರೀಕ್ಷೆಯಲ್ಲಿ ಕೊರೋನ ಪಾಸಿಟಿವ್ ದೃಢಪಟ್ಟಿದೆ ಎನ್ನಲಾಗಿದೆ.

ಹುಟ್ಟೂರು ಹೊನಗೇರಾದಲ್ಲಿ ಅಂತ್ಯಸಂಸ್ಕಾರ ಮಾಡಲು ಅವರ ಕುಟುಂಬ ನಿರ್ಧರಿಸಿದ್ದ ಹಿನ್ನೆಲೆ ಮೃತದೇವನ್ನು ಸ್ವಗ್ರಾಮಕ್ಕೆ ತರಲಾಗಿತ್ತು. ಮಕ್ಕಳು, ಹೆಂಡತಿ ಅನುಪಸ್ಥಿತಿಯಲ್ಲೇ ನಡೆದಿದ್ದ ಅಂತಿಮ ಸಂಸ್ಕಾರದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಅಮಾನವೀಯವಾಗಿ ಸಿಬ್ಬಂದಿ ನಡೆದುಕೊಂಡಿದ್ದು, ಮಾನವ ಸಮಾಜ ತಲೆ ತಗ್ಗಿಸುವಂತಾಗಿದೆ.

ಘಟನೆ ಕುರಿತು ಜಿಲ್ಲಾಡಳಿತದಿಂದ ಸದ್ಯಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಸಾಮಾಜಿಕ ಜಾಲಾತಾಣದಲ್ಲಿ ವಿಡಿಯೋ ವಿಕ್ಷಿಸಿದ ನೆಟ್ಟಿಗರು ಆರೋಗ್ಯ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News