ಅಂತಾರಾಷ್ಟ್ರೀಯ ಮಾದಕ ವಸ್ತು ಸೇವನೆ ವಿರೋಧಿ ದಿನಾಚರಣೆ

Update: 2020-07-01 16:36 GMT

ಉಡುಪಿ, ಜು.1: ಹಿರಿಯಡ್ಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಗಳ ವತಿಯಿಂದ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ವಿರೋಧಿ ದಿನಾಚರಣೆಯನ್ನು ಆನ್‌ಲೈನ್ ಮೂಲಕ ಆಯೋಜಿಸಲಾಗಿತ್ತು. ಕಾಲೇಜಿನ ಪ್ರಾಂಶುಪಾಲೆ ಡಾ.ನಿಕೇತನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕೋವಿಡ್‌ನಂತಹ ಮಾರಕ ರೋಗಗಳ ವಿರುದ್ಧ ಹೋರಾಡುತ್ತಿರುವ ಸಂದಿಗ್ಧ ಪರಿಸ್ಥಿತಿಯ ದಿನಗಳಲ್ಲಿ ಸಧೃಡ ಆರೋಗ್ಯದ ಮಹತ್ವ ಕುರಿತು ಪ್ರತಿಯೊಬ್ಬರಿಗೂ ಅರಿವಾಗಿದ್ದು, ವಿದ್ಯಾರ್ಥಿಗಳು ಮಾದಕ ವಸ್ತುಗಳ ವ್ಯಸನಕ್ಕೆ ಒಳಗಾಗಿ ತಮ್ಮ ದೇಹ ಮತ್ತು ಮನಸ್ಸಿನ ಆರೋಗ್ಯವನ್ನು ಹಾಳು ಮಾಡಿಕೊಳ್ಳದೇ ಆರೋಗ್ಯಕರ ಚಟುವಟಿಕೆಗಳನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಂಡು ಸದೃಢ ರಾಗಬೇಕು ಎಂದು ಕಿವಿ ಮಾತು ಹೇಳಿದರು.

ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಪ್ರವೀಣ್ ಶೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಸುಜಯ ಕೆ. ಹಾಗೂ ಇತರರು ಉಪಸ್ಥಿತರಿದ್ದರು. ಪ್ರವೀಣ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಸುಭಾಶ್ ಹೆಚ್.ಕೆ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News