​ಮಂಗಳೂರು: ಪೈಲೆಟ್ ತರಬೇತಿ ಪಡೆದಿದ್ದ ಯುವಕ ಆತ್ಮಹತ್ಯೆ

Update: 2020-07-01 16:49 GMT

ಮಂಗಳೂರು : ನಗರದ ಮರೋಳಿ ನಿವಾಸಿ ಅದ್ವೈತ  ಶೆಟ್ಟಿ (32)  ಬುಧವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅವರು ಪೈಲೆಟ್ ತರಬೇತಿ ಪಡೆದಿದ್ದು, ಕೆಲಸ ಹುಡುಕುತ್ತಿದ್ದರು. 3 ದಿನಗಳ ಹಿಂದೆಯಷ್ಟೆ ಊರಿಗೆ ಬಂದಿದ್ದರು ಎನ್ನಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. 

ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News