ಬೆಂಗಳೂರು: ಇಂದು ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್‌ ಪದಗ್ರಹಣ

Update: 2020-07-02 05:50 GMT

ಬೆಂಗಳೂರು: ನಗರದ ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ.ಶಿವಕುಮಾರ್ ಅವರು ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದು, ತಮ್ಮ ಪದಗ್ರಹಣ ಕಾರ್ಯಕ್ರಮದ ಕೆಲವೇ ಕ್ಷಣಗಳ ಮುನ್ನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿ ಮುಂಭಾಗ ಧ್ವಜಾರೋಹಣ ನೆರವೇರಿಸಿದರು.

ರಾಜ್ಯದ 7,800 ಸ್ಥಳಗಳಲ್ಲಿ ಈ ಕಾರ್ಯಕ್ರಮವನ್ನು ನೇರ ಪ್ರಸಾರ ಮಾಡಲು ವ್ಯವಸ್ಥೆ ಮಾಡಲಾಗಿದ್ದು, ವೇದಿಕೆಯ ಸುತ್ತಲೂ ಬೃಹತ್ ಡಿಜಿಟಲ್ ಪರದೆಗಳನ್ನು ಅಳವಡಿಸಲಾಗಿದೆ. ಸುಮಾರು 200 ಮಂದಿಗಷ್ಟೇ ಕೆಪಿಸಿಸಿ ಸಭಾಂಗಣದೊಳಗೆ ಪ್ರವೇಶಿಸುವ ಅವಕಾಶ ನೀಡಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News