ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ಸ್ವೀಕಾರ

Update: 2020-07-02 06:07 GMT

ಬೆಂಗಳೂರು : ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಇಂದು ಅಧಿಕಾರ ಸ್ವೀಕಾರ ಮಾಡಿದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ನಿಕಟ ಪೂರ್ವ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಂದ ಪಕ್ಷದ ಧ್ವಜ ಹಸ್ತಾಂತರ ಮಾಡಲಾಯಿತು.

ಕಾರ್ಯಾಧ್ಯಕ್ಷರುಗಳಾಗಿ ಸಲೀಂ ಅಹ್ಮದ್, ಸತೀಶ್ ಜಾರಕಿಹೊಳಿ, ಈಶ್ವರ ಬಿ.ಖಂಡ್ರೆ ಪದಗ್ರಹಣ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News