ಮಧ್ಯಪ್ರದೇಶದಲ್ಲಿ ಸಂಪುಟ ವಿಸ್ತರಣೆ: 28 ಸಚಿವರಿಂದ ಪ್ರಮಾಣವಚನ

Update: 2020-07-02 07:27 GMT

ಭೋಪಾಲ್, ಜೂ.2: ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಮಧ್ಯಪ್ರದೇಶ ಸರಕಾರ ಗುರುವಾರ ಸಂಪುಟ ವಿಸ್ತರಣೆ ಮಾಡಿದ್ದು, ಬಿಜೆಪಿ ರಾಜ್ಯಸಭಾ ಸದಸ್ಯ ಜ್ಯೋತಿರಾದಿತ್ಯ ಸಿಂಧಿಯಾರ 12 ಜನ ಆಪ್ತರು ಸೇರಿದಂತೆ ಒಟ್ಟು 28 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಕಮಲನಾಥ್ ಸರಕಾರವನ್ನು ಬೀಳಿಸಿದ್ದ ಸಿಂಧಿಯಾರನ್ನು ಮಾರ್ಚ್‌ನಲ್ಲಿ ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಲಾಗಿತ್ತು.

ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಸಚಿವರಿಗೆ ಪ್ರತಿಷ್ಞಾವಿಧಿ ಬೋಧಿಸಿದರು.

ಇಂದು 20 ಶಾಸಕರು ಸಂಪುಟ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News