ಪಶು ವೈದ್ಯಕೀಯ ಸಿಬ್ಬಂದಿ ನೇಮಕಕ್ಕೆ ಆದೇಶ

Update: 2020-07-02 11:55 GMT

ಬೆಂಗಳೂರು, ಜು. 2: ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆಯಡಿ 371 (ಜೆ) ಅಡಿಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಸ್ಥಳೀಯ ವೃಂದದ 32 ಪಶು ವೈದ್ಯಕೀಯ ಪರೀರಕ್ಷಕರ ಹಾಗೂ 83 ಪಶು ವೈದ್ಯಕೀಯ ಸಹಾಯಕರ ಹುದ್ದೆ ತುಂಬಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲು ರಾಜ್ಯ ಪತ್ರ ಹೊರಡಿಸಲಾಗಿದೆ.

ಪಶುಪರೀರಕ್ಷಕರ ಹುದ್ದೆಗೆ ಬಿಎಸ್ಸಿ  ಪದವಿಯನ್ನು ಪ್ರಾಣಿಶಾಸ್ತ್ರವನ್ನು ಐಚ್ಛಿಕ ವಿಷಯವಾಗಿ ಪದವಿ ಅಂಕಗಳ ಆಧಾರ ಮೇಲೆ ಹಾಗೂ ರೋಸ್ಟರ್ ವಿಧಾನ ಅನುಸರಿಸಿ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುವುದು. ಒಂದು ವೇಳೆ ಬಿಎಸ್ಸಿ(ಪ್ರಾಣಿಶಾಸ್ತ್ರ) ಅಭ್ಯರ್ಥಿಗಳು ಲಭ್ಯವಿಲ್ಲದ ಸಂದರ್ಭದಲ್ಲಿ ಯಾವುದೇ ವಿಜ್ಞಾನ ವಿಷಯದಲ್ಲಿ ಪದವಿಯನ್ನು ಪಡೆದಿರುವ ಮತ್ತು ಪಿಯುಸಿಯಲ್ಲಿ ಐಚ್ಛಿಕವಾಗಿ ಜೀವಶಾಸ್ತ್ರವನ್ನು ಅಭ್ಯಸಿಸಿರುವ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು ಎಂದು ತಿಳಿಸಲಾಗಿದೆ.

ಪಶುವೈದ್ಯಕೀಯ ಸಹಾಯಕರ ಹುದ್ದೆಗೆ ಪಶುವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿವಿ ಅಥವಾ ಯಾವುದೇ ವಿವಿ ನಡೆಸಲಾದ ಪಶು ಆರೋಗ್ಯ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಸದರಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಹಾಗೂ ರೋಸ್ಟರ್ ವಿಧಾನ ಅನುಸರಿಸಿ ಆಯ್ಕೆ ಪಟ್ಟಿ ಪ್ರಕಟಿಸಲಾಗುವುದು ಎಂದು ಆದೇಶಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News