ಡಿಕೆಶಿ ಪದಗ್ರಹಣಕ್ಕೆ ಸಾಕ್ಷಿಯಾದ ಉಡುಪಿ ಜಿಲ್ಲಾ ಕಾಂಗ್ರೆಸ್

Update: 2020-07-02 12:52 GMT

ಉಡುಪಿ, ಜು.2: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ಇವರ ಇವರ ಪದಗ್ರಹಣ ಸಮಾರಂಭಕ್ಕೆ ಉಡುಪಿಯಲ್ಲಿ ಜಿಲ್ಲಾ ಕಾಂಗ್ರೆಸ್ ಸಹ ಸಾಕ್ಷಿಯಾಯಿತು.

ಉಡುಪಿಯ ಬ್ರಹ್ಮಗಿರಿಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಹಾಗೂ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಬಾಭವನದಲ್ಲಿ ನಗರಸಭಾ ಸದಸ್ಯ ರಮೇಶ್ ಕಾಂಚನ್ ಇವರ ನೇತೃತ್ವದಲ್ಲಿ ಕಾರ್ಯಕ್ರಮದ ನೇರ ವೀಕ್ಷಣೆಗೆ ವ್ಯವಸ್ಥೆಯನ್ನು ಮಾಡಲಾಗಿತ್ತು. ನೂರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರು ನೇರ ಪ್ರಸಾರದಲ್ಲಿ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವನ್ನು ಬೃಹತ್ ಟಿವಿ ಪದರೆಯ ಮೇಲೆ ವೀಕ್ಷಿಸಿದರು.

ಕಾರ್ಯಕ್ರಮದ ಪ್ರಾರಂಭದಲ್ಲಿ ಚೀನದ ಗಡಿಯಲ್ಲಿ ಹುತಾತ್ಮರಾದ ವೀರ ಸೈನಿಕರಿಗೆ ಗೌರವ ಸಲ್ಲಿಸಿ ಎರಡು ನಿಮಿಷಗಳ ಮೌನ ಪ್ರಾರ್ಥನೆ ಯನ್ನು ಸಲ್ಲಿಸಲಾಯಿತು. ಡಿಕೆಶಿ ಅವರು ಕೆಪಿಸಿಸಿಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿ ಸುತಿದ್ದಂತೆ ಕಾರ್ಯಕರ್ತರು ಕರತಾಡನದ ಮೂಲಕ ಬೆಂಬಲ ಸೂಚಿಸಿದರು.

ಬೆಂಗಳೂರಿನಂತೆ ಇಲ್ಲೂ ಜಿಲ್ಲಾ ಕಾಂಗ್ರೆಸ್ ನಾಯಕರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಲ್ಲದೇ ಸಂವಿಧಾ ನದ ಪೀಠಿಕೆಯ ಮೇಲೆ ಪ್ರಮಾಣವಚನ, ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತ, ಧ್ಯೇಯ ಗಳ ಮೇಲೆ ಪ್ರತಿಜ್ಞೆ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಹಿರಿಯ ಉಪಾಧ್ಯಕ್ಷ ಮಂಜುನಾಥ ಭಂಡಾರಿ, ಯು.ಆರ್.ಸಭಾಪತಿ, ಜಿಲ್ಲಾಧ್ಯಕ್ಷ ಅಶೋಕಕುಮಾರ್ ಕೊಡವೂರು, ಕೃಷ್ಣಮೂರ್ತಿ ಆಚಾರ್ಯ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿಶ್ವಾಸ್ ಅಮೀನ್, ದಿವಾಕರ ಶೆಟ್ಟಿ, ಅಮೃತಾ ಕೃಷ್ಣಮೂರ್ತಿ, ನ್ಯಾಯವಾದಿ ಲಕ್ಷ್ಮಣ ಶೆಣೈ, ನಾಯಕ ರಮೇಶ್ ಕಾಂಚನ್, ಸದಾನಂದ ಕಾಂಚನ್, ನರಸಿಂಹಮೂರ್ತಿ ಹಾಗೂ ಇತರರು ಉಪಸ್ಥಿತರಿದ್ದರು.

ಡಿಕೆಶಿ ಭಾವಚಿತ್ರಕ್ಕೆ ಕ್ಷೀರಾಭಿಷೇಕ: ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವ ಕುಮಾರ್ ಅಧಿಕಾರ ಸ್ವೀಕರಿಸುತ್ತಿದ್ದಂತೆ ಉಡುಪಿ ಜಿಲ್ಲೆಯ ಹಲವೆಡೆ ಸಂಭ್ರ ಮಾಚರಣೆ ನಡೆದಿದೆ. ಪರ್ಕಳ ವಾರ್ಡ್‌ನಲ್ಲಿ ಒಟ್ಟಾಗಿ ಸೇರಿದ ಕಾಂಗ್ರೆಸ್ ಕಾರ್ಯಕರ್ತರು ವಿಶಿಷ್ಟವಾಗಿ ಪದಗ್ರಹಣ ಸಮಾರಂಭದ ಸಂಭ್ರ ಮಾಚರಣೆ ಮಾಡಿದರು. ಅವರು ಡಿಕೆ ಶಿವಕುಮಾರ್ ಭಾವಚಿತ್ರಕ್ಕೆ ಹಾಲಿನ ಅಭಿಷೇಕವನ್ನು ನಡೆಸಿದರು. ಬಳಿಕ ಈಡುಗಾಯಿ ಒಡೆದು ಕಾಂಗ್ರೆಸ್ಸಿಗೆ ಜಯಕಾರ ಹಾಕಿದರು. ವಿಶೇಷ ಸಂಭ್ರಮಾಚರಣೆಯ ವೇಳೆ ಸ್ಥಳೀಯ ಕಾಂಗ್ರೆಸ್ ನಾಯಕರು ಸ್ಥಳದಲ್ಲಿ ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News