BREAKING NEWS: ಮಂಗಳೂರು: ಶಾಸಕ ಡಾ.ಭರತ್ ಶೆಟ್ಟಿಯವರಿಗೆ ಕೊರೋನ ಪಾಸಿಟಿವ್

Update: 2020-07-02 13:47 GMT

ಮಂಗಳೂರು: ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿಯವರಿಗೆ ಕೊರೋನ ಪಾಸಿಟಿವ್ ಆಗಿರುವುದು ದೃಢಪಟ್ಟಿದೆ. ಈ ಬಗ್ಗೆ ಸ್ವತಃ ಭರತ್ ಶೆಟ್ಟಿಯವರು ಟ್ವೀಟ್ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ನನಗೆ ಕೋವಿಡ್ 19 ಪಾಸಿಟಿವ್ ಆಗಿದೆ. ನಿಮ್ಮೆಲ್ಲರ ಆಶೀರ್ವಾದದಿಂದ ನಾನು ಚೇತರಿಸುತ್ತಿದ್ದೇನೆ. ಕೆಲ ದಿನಗಳ ಕಾಲ ಚಿಕಿತ್ಸೆ ಪಡೆಯಲಿದ್ದೇನೆ.

ದಯವಿಟ್ಟು ಪ್ರತಿಯೊಬ್ಬರು ಸುರಕ್ಷಿತ ಅಂತರ ಕಾಯ್ದುಕೊಳ್ಳಿ,  ಮಾಸ್ಕ್ ಧರಿಸಿ ಮತ್ತು ಕೈಗಳನ್ನು ತೊಳೆದುಕೊಳ್ಳಿ. ದಯವಿಟ್ಟು ನಿಮ್ಮ ಮತ್ತು ನಿಮ್ಮ ಹತ್ತಿರದವರ ಬಗ್ಗೆ ಕಾಳಜಿ ವಹಿಸಿ” ಎಂದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News