ನೀಟ್, ಜೆಇಇ ಪರೀಕ್ಷೆ: ವರದಿ ಕೇಳಿದ ಸರಕಾರ

Update: 2020-07-02 15:58 GMT

ಹೊಸದಿಲ್ಲಿ, ಜು.2: ಜುಲೈ ಉತ್ತರಾರ್ಧದಲ್ಲಿ ನೀಟ್ ಮತ್ತು ಜೆಇಇ ಪರೀಕ್ಷೆ ನಡೆಸಲು ಪರಿಸ್ಥಿತಿ ಅನುಕೂಲಕರವಾಗಿದೆಯೇ ಎಂಬ ಬಗ್ಗೆ ವರದಿ ಸಲ್ಲಿಸುವಂತೆ ತಜ್ಞರ ಸಮಿತಿಗೆ ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಸೂಚಿಸಿದೆ.

ಕೊರೋನ ಸೋಂಕಿನ ಹಿನ್ನೆಲೆಯಲ್ಲಿ, ಯಾವುದೇ ಅಪಾಯವಿಲ್ಲದೆ ಪರೀಕ್ಷೆ ನಡೆಸುವ ಬಗ್ಗೆ ವಿದ್ಯಾರ್ಥಿಗಳ ಹೆತ್ತವರಲ್ಲಿ ಆತಂಕವಿದೆ. ಈಗ ಇರುವ ಪರಿಸ್ಥಿತಿಯನ್ನು ಗಮನಿಸಿ ಹಾಗೂ ಜೆಇಇ ಮತ್ತು ನೀಟ್(ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ) ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್ಥಿಗಳ ಹೆತ್ತವರ ಕೋರಿಕೆ ಹಿನ್ನೆಲೆಯಲ್ಲಿ , ಈ ಕುರಿತು ಸಲಹೆ ನೀಡಲು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ(ಎನ್‌ಟಿಎ)ಯ ಅಧ್ಯಕ್ಷ ವಿನೀತ್ ಜೋಷಿ ನೇತೃತ್ವದ ತಜ್ಞರ ಸಮಿತಿಗೆ ಸೂಚಿಸಲಾಗಿದೆ.

ಸಮಿತಿ ಶುಕ್ರವಾರ (ಜು.3ರಂದು) ವರದಿ ನೀಡುವ ನಿರೀಕ್ಷೆಯಿದೆ ಎಂದು ಮಾನವ ಸಂಪನ್ಮೂಲ ಇಲಾಖೆಯ ಸಚಿವ ರಮೇಶ್ ಪೊಖ್ರಿಯಾಲ್ ನಿಷಾಂಗ್ ಗುರುವಾರ ಹೇಳಿದ್ದಾರೆ. ಮೆಡಿಕಲ್ ಕಾಲೇಜುಗಳಿಗೆ ಪ್ರವೇಶಕ್ಕಾಗಿ ನಡೆಸುವ ನೀಟ್ ಪರೀಕ್ಷೆ ಮತ್ತು ಐಟಿಐ ಮತ್ತು ಇಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶಕ್ಕಾಗಿ ನಡೆಸುವ ಜೆಇಇ ಮೈನ್ಸ್ ಅನ್ನು ಕೊರೋನ ಸೋಂಕಿನ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದು, ಇದೀಗ ಜುಲೈ 18ರಿಂದ 23ರವರೆಗೆ ಜೆಇಇ, ಜುಲೈ 26ರಂದು ನೀಟ್ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News