50,000 ದಾಟಿದ ಅಮೆರಿಕದ ದೈನಂದಿನ ಸೋಂಕು ಪ್ರಕರಣಗಳ ಸಂಖ್ಯೆ

Update: 2020-07-02 17:03 GMT

ಲಾಸ್ ಏಂಜಲಿಸ್ (ಅಮೆರಿಕ), ಜು. 2: ಅಮೆರಿಕದ ದೈನಂದಿನ ಕೊರೋನ ವೈರಸ್ ಸೋಂಕು ಪ್ರಕರಣಗಳ ಸಂಖ್ಯೆ ಬುಧವಾರ 50,000ವನ್ನು ದಾಟಿದೆ ಹಾಗೂ ಇದು ಒಂದು ದಿನದಲ್ಲಿ ವರದಿಯಾದ ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ದಾಖಲೆಯಾಗಿದೆ.

 ಕಳೆದ ವಾರದಲ್ಲಿ ಜಾಗತಿಕ ಸೋಂಕು ಪ್ರಕರಣಗಳ ಸಂಖ್ಯೆಯು ಅತ್ಯಧಿಕ ಮಟ್ಟವನ್ನು ತಲುಪಿರುವುದನ್ನು ವಿಶ್ವ ಆರೋಗ್ಯ ಸಂಸ್ಥೆಯ ಅಂಕಿಸಂಖ್ಯೆಗಳು ತೋರಿಸಿವೆ. ಜಾಗತಿಕ ದೈನಂದಿನ ನೂತನ ಸೋಂಕು ಪ್ರಕರಣಗಳ ಸಂಖ್ಯೆ ಪ್ರತಿ ದಿನ 1.60 ಲಕ್ಷವನ್ನು ಮೀರುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರಾಸ್ ಅದನಾಮ್ ಗೇಬ್ರಿಯೇಸಸ್ ಹೇಳಿದ್ದಾರೆ.

ಅಮೆರಿಕದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 52,000ಕ್ಕೂ ಅಧಿಕ ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ ಎಂದು ಜಾನ್ಸ್ ಹಾಪ್‌ಕಿನ್ಸ್ ವಿಶ್ವವಿದ್ಯಾನಿಲಯದ ಅಂಕಿಸಂಖ್ಯೆಗಳು ತಿಳಿಸಿವೆ.

ಬ್ರೆಝಿಲ್: 60,000 ದಾಟಿದ ಮೃತರ ಸಂಖ್ಯೆ

ಬ್ರೆಝಿಲ್‌ನಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 1,000ಕ್ಕೂ ಅಧಿಕ ಸಾವುಗಳು ಸಂಭವಿಸಿದ್ದು, ದೇಶದಲ್ಲಿ ಈವರೆಗೆ ನೂತನ-ಕೊರೋನ ವೈರಸ್‌ನಿಂದಾಗಿ ಮೃತಪಟ್ಟವರ ಸಂಖ್ಯೆ 60,000ವನ್ನು ದಾಟಿದೆ ಎಂದು ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ.

ಬ್ರೆಝಿಲ್ ಈಗ ಅಮೆರಿಕದ ಬಳಿಕ, ಜಾಗತಿಕ ಮಟ್ಟದಲ್ಲಿ ಕೊರೋನ ವೈರಸ್‌ನಿಂದ ಅತ್ಯಂತ ಹೆಚ್ಚು ಹಾನಿಗೀಡಾದ ಎರಡನೇ ದೇಶವಾಗಿದೆ. ಅಲ್ಲಿ ಒಂದು ದಿನದ ಅವಧಿಯಲ್ಲಿ 46,000ಕ್ಕೂ ಅಧಿಕ ಹೊಸ ಸೋಂಕು ಪ್ರಕರಣಗಳು ವರದಿಯಾಗಿದೆ ಹಾಗೂ ಅಲ್ಲಿನ ಒಟ್ಟು ಸೋಂಕು ಪೀಡಿತರ ಸಂಖ್ಯೆ 14.4 ಲಕ್ಷಕ್ಕೆ ಏರಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News