ಕನ್ನಡ ಶಾಸ್ತ್ರೀಯ ಉನ್ನತ ಅಧ್ಯಯನ ಕೇಂದ್ರಕ್ಕೆ ಸ್ವಯತ್ತತೆ ಸಿಗಲು ಅಡ್ಡಿ: ಆರೋಪ

Update: 2020-07-02 17:27 GMT

ಬೆಂಗಳೂರು, ಜು.2: ಕನ್ನಡಕ್ಕೆ ಶಾಸ್ತ್ರಿಯ ಸ್ಥಾನಕ್ಕೆ ಸಂಬಂಧಿಸಿದಂತೆ ಕನ್ನಡ ಶಾಸ್ತ್ರೀಯ ಉನ್ನತ ಅಧ್ಯಯನ ಕೇಂದ್ರಕ್ಕೆ ಸ್ವಯತ್ತತೆ ಸಿಗಲು ರಾಜ್ಯ ಉನ್ನತ ಶಿಕ್ಷಣ ಇಲಾಖೆ ಅಡ್ಡಿ ಪಡಿಸುತ್ತಿದೆ ಎಂದು ಕನ್ನಡ ಗೆಳೆಯರ ಬಳಗದ ಸಂಚಾಲಕ ರಾ.ನಂ.ಚಂದ್ರಶೇಖರ ಆರೋಪಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಮೈಸೂರಿನಲ್ಲಿ ಶಾಸ್ತ್ರೀಯ ಕನ್ನಡ ಉನ್ನತ ಅಧ್ಯಯನ ಕೇಂದ್ರವನ್ನು ಸ್ಥಾಪಿಸಲು 3 ಎಕರೆ ಜಾಗವನ್ನು ನಿಗಧಿಪಡಿಸಿ ಕೇಂದ್ರ ಸಂಪನ್ಮೂಲ ಸಚಿವಾಲಯಕ್ಕೆ ಭೂಮಿಯನ್ನು ಹಸ್ತಾಂತರಿಸಲಾಗಿತ್ತು. ಆದರೆ, ಉನ್ನತ ಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜೂ.12ರಂದು ಪತ್ರ ಬರೆದು ಜಾಗವನ್ನು ಹಿಂಪಡೆಯಲು ಆದೇಶಿಸಿದ್ದಾರೆ. ಹಾಗೂ ಶಾಸ್ತ್ರೀ ಯ ಭಾಷಾ ಕೇಂದ್ರಕ್ಕೆ ಪರ್ಯಾಯ ಜಾಗವನ್ನು ಹುಡುಕಲು ಪತ್ರದಲ್ಲಿ ಹೇಳಲಾಗಿದೆ. ಇದರಿಂದ ಶಾಸ್ತ್ರೀಯ ಸ್ಥಾನಮಾನದ ಮಾನ್ಯತಾ ಪ್ರಕ್ರಿಯೆಗಳು ಹಿನ್ನಡೆಯಾಗುತ್ತಿದೆ ಎಂದು ಅವರು ಪ್ರಕಟನೆಯಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News