ಕೊರೋನ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸಿದ ಆಸ್ಪತ್ರೆಗಳ ವಿರುದ್ಧ ಎಫ್‍ಐಆರ್

Update: 2020-07-02 18:01 GMT

ಬೆಂಗಳೂರು, ಜು2: ಕೊರೋನ ಸೋಂಕಿತರಿಗೆ ಚಿಕಿತ್ಸೆ ನೀಡಲು ನಿರಾಕರಿಸಿದ 18 ಖಾಸಗಿ ಆಸ್ಪತ್ರೆಗಳ ವಿರುದ್ಧ ಎಫ್‍ಐಆರ್ ದಾಖಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಬಿ.ಹೆಚ್. ಅನಿಲ್ ಕುಮಾರ್ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದ ಖಾಸಗಿ ಆಸ್ಪತ್ರೆಗಳು 52 ವರ್ಷದ ಕೊರೋನ ಸೋಂಕಿತ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳದ ಹಿನ್ನೆಲೆ ವ್ಯಕ್ತಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಸೋಂಕಿತ ವ್ಯಕ್ತಿಯನ್ನ ದಾಖಲಿಸಿಕೊಳ್ಳದ ಸಂಸ್ಥೆ ಸೇರಿದಂತೆ ಒಟ್ಟು 18 ಆಸ್ಪತ್ರೆಗಳ ವಿರುದ್ಧ ಎಫ್‍ಐಆರ್ ದಾಖಲಾಗಿದೆ ಎಂದು ತಿಳಿಸಿದರು.

ಬಿಬಿಎಂಪಿ ವ್ಯಾಪ್ತಿಯ ಆಸ್ಪತ್ರೆಗಳು ಕೊರೋನ ಸೋಂಕಿತರಿಗೆ ಚಿಕಿತ್ಸೆ ನೀಡಲು ನಿರಾಕರಿಸಿದ ಎಲ್ಲ ಖಾಸಗಿ ಸಂಸ್ಥೆಗಳ ಮೇಲೆ ಕಠಿಣಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಕೊರೋನ ಸೋಂಕು ಎದುರಿಸಲು ಬಿಬಿಎಂಪಿ ಎಲ್ಲಾ ರೀತಿಯಲ್ಲೂ ಸಜ್ಜಾಗಿದೆ. ನಗರದ ಜನರು ಆತಂಕಕ್ಕೆ ಒಳಗಾಗುವುದು ಬೇಡ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News