ಮಧ್ಯಪ್ರದೇಶದಲ್ಲಿ ಸಂಪುಟ ವಿಸ್ತರಣೆ ಬೆನ್ನಲ್ಲೇ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ

Update: 2020-07-03 07:33 GMT

ಭೋಪಾಲ್, ಜು.2: ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಮಧ್ಯಪ್ರದೇಶ ಸರಕಾರ ಗುರುವಾರ ಸಂಪುಟ ವಿಸ್ತರಣೆ ಮಾಡಿದ್ದು, ಕಾಂಗ್ರೆಸ್‌ನಿಂದ ಪಕ್ಷಾಂತರವಾಗಿರುವ ಜ್ಯೋತಿರಾದಿತ್ಯ ಸಿಂಧಿಯಾ ಬೆಂಬಲಿಗರೇ ಸಿಂಹಪಾಲು ಪಡೆದಿದ್ದಾರೆ. ಇದರಿಂದಾಗಿ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಬಿಜೆಪಿಯೊಳಗೆ ಭಿನ್ನಮತ ಸ್ಫೋಟಿಸಿದೆ.

ಸಚಿವ ಸ್ಥಾನ ಆಕಾಂಕ್ಷಿಗಳಾದ ಹಲವು ಶಾಸಕರ ಬೆಂಬಲಿಗರು ರಾಜ್ಯದಾದ್ಯಂತ ಪ್ರತಿಭಟನೆಗೆ ಇಳಿದಿದ್ದಾರೆ. ತಮ್ಮ ನಾಯಕರಿಗೆ ಸಚಿ ಸ್ಥಾನ ನೀಡಬೇಕೆಂದು ಬೇಡಿಕೆ ಇಟ್ಟಿದ್ದಾರೆ.

ಈತನ್ಮಧ್ಯೆ ಪಕ್ಷದ ಹಿರಿಯ ನಾಯಕಿ ಉಮಾಭಾರತಿ ಪಕ್ಷದ ರಾಜ್ಯಾಧ್ಯಕ್ಷ ವಿ.ಡಿ. ಶರ್ಮಾಗೆ ಪತ್ರ ಬರೆದು, ತನ್ನ ಸಲಹೆಯನ್ನು ಸಂಪೂರ್ಣ ನಿರ್ಲಕ್ಷಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 ತನ್ನ ನಿಷ್ಟಾವಂತ ತಂಡದ ಒಂದು ಭಾಗಕ್ಕೆ ಸಂಪುಟದಲ್ಲಿ ಸ್ಥಾನ ನೀಡಲಾಗಿಲ್ಲ.ಇದರಿಂದ ನನಗೂ ಬೇಸರವಾಗಿದೆ ಎಂದು ಸ್ವತಃ ಮುಖ್ಯಮಂತ್ರಿ ಚೌಹಾಣ್ ಹೇಳಿದ್ದಾರೆ.

ವಿವಿಧ ಸಚಿವಾಲಯದ ವಿಶ್ವಾಸದಲ್ಲಿದ್ದ ಬೆಂಬಲಿಗರು ಬೀದಿಗಿಳಿದು ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News