ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ

Update: 2020-07-03 12:15 GMT

ಉಡುಪಿ, ಜು.3: ಉಡುಪಿ ಜಿಲ್ಲೆಯಾದ್ಯಂತ ಮಳೆ ಬಿರುಸುಗೊಂಡಿದೆ. ಕಳೆದ 24 ಗಂಟೆಗಳಿಂದ ಜಿಲ್ಲೆಯ ಎಲ್ಲಾ ಕಡೆಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ. ಇಂದು ಬೆಳಗ್ಗೆ 8:30ಕ್ಕೆ ಮುಕ್ತಾಯಗೊಂಡಂತೆ ಹಿಂದಿನ 24 ಗಂಟೆಗಳ ಅವಧಿಯಲ್ಲಿ ಉಡುಪಿ ಜಿಲ್ಲೆಯಲ್ಲಿ ಸರಾಸರಿ 92ಮಿ.ಮೀ. ಮಳೆಯಾಗಿದೆ.

ಉಡುಪಿಯಲ್ಲಿ 93ಮಿ.ಮೀ., ಕುಂದಾಪುರದಲ್ಲಿ 62ಮಿ.ಮೀ. ಹಾಗೂ ಕಾರ್ಕಳದಲ್ಲಿ 123 ಮಿ.ಮೀ. ಮಳೆ ಸುರಿದಿರುವ ಬಗ್ಗೆ ಹವಾಮಾನ ಇಲಾಖೆಯ ಮಾಹಿತಿ ತಿಳಿಸಿದೆ.

ಮನೆಗೆ ಹಾನಿ: ಜಿಲ್ಲೆಯಲ್ಲಿ ಸುರಿಯುತ್ತಿರುವ ಬಿರುಸಿನ ಮಳೆ ಹಾಗೂ ಗಾಳಿಯಿಂದ ಬ್ರಹ್ಮಾವರ ತಾಲೂಕು ಐರೋಡಿ ಗ್ರಾಮದ ಕೆರೆಲ್ ಡೆಸಾ ಗೋಳಿಬೆಟ್ಟು ಇವರ ಮನೆಗೆ ಸಂಪೂರ್ಣ ಹಾನಿಯಾಗಿದ್ದು, ಸುಮಾರು ಒಂದು ಲಕ್ಷ ರೂ. ನಷ್ಟದ ಅಂದಾಜು ಮಾಡಲಾಗಿದೆ.

ಅದೇ ರೀತಿ ಕುಂದಾಪುರ ತಾಲೂಕು ಬೇಳೂರು ಗ್ರಾಮದ ರುದ್ರ ಕೊಠಾರಿ ಎಂಬವರ ವಾಸ್ತವ್ಯದ ಮನೆಗೂ ಗಾಳಿ-ಮಳೆಯಿಂದ ಭಾಗಶ: ಹಾನಿಯಾಗಿದ್ದು ಸುಮಾರು 40 ಸಾವಿರ ರೂ.ಗಳ ನಷ್ಟವಾಗಿರುವುದಾಗಿ ಅಂದಾಜಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News