ಸರಕಾರ ನಮ್ಮ ಸಲಹೆಯನ್ನು ಪರಿಗಣಿಸಿಲ್ಲ: ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ

Update: 2020-07-04 13:23 GMT

ಬೆಂಗಳೂರು, ಜು. 4: 'ಮಾರಕ ಕೊರೋನ ವೈರಸ್ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ನಮ್ಮ ಸಲಹೆ-ಸೂಚನೆಗಳನ್ನು ಪರಿಗಣಿಸಿಲ್ಲ. ಹೀಗಾಗಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕೊರೋನ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿವೆ' ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಇಂದಿಲ್ಲಿ ಟೀಕಿಸಿದ್ದಾರೆ.

ಶನಿವಾರ ಸರಣಿ ಟ್ವೀಟ್ ಮಾಡಿರುವ ಅವರು, 'ಮೊದಲ ಸರ್ವಪಕ್ಷ ಸಭೆಯಲ್ಲೇ ನಾನು ಬೆಂಗಳೂರು ಅಂತರ್ ರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ವಿಶಾಲ ಪ್ರಮಾಣದ ಕೋವಿಡ್ ಸೆಂಟರ್ ಸ್ಥಾಪಿಸಿ ಕನಿಷ್ಟ 5 ಸಾವಿರ ಹಾಸಿಗೆಗಳ ವ್ಯವಸ್ಥೆ ಮಾಡಲು ಕಾಂಗ್ರೆಸ್ ಪಕ್ಷದ ಪರವಾಗಿ ಸಲಹೆ ನೀಡಿದ್ದೆ' ಎಂದು ತಿಳಿಸಿದ್ದಾರೆ.

ಇದೀಗ ವಿಳಂಬವಾಗಿ ಸರಕಾರ ಬೆಂಗಳೂರು ಅಂತರ್ ರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಹಾಸಿಗೆ ಸಿದ್ದಪಡಿಸಲು ಮುಂದಾಗಿದೆ ಎಂದು ತಿಳಿದು ಬಂದಿದೆ. ರಾಜ್ಯ ಸರಕಾರ ಇದೇ ಕೆಲಸವನ್ನು ಮೊದಲೇ ಮಾಡಿದ್ದರೆ ಇನ್ನಷ್ಟು ಜನರ ಪ್ರಾಣ ಉಳಿಸಬಹುದಿತ್ತು. ಈಗಲಾದರೂ ಸಮರೋಪಾದಿಯಲ್ಲಿ ಬೃಹತ್ ಕೋವಿಡ್-19 ಕೇರ್ ಸೆಂಟರ್ ಸಿದ್ಧಪಡಿಸಿ ಶೀಘ್ರದಲ್ಲೆ ಆರಂಭ ಮಾಡಬೇಕು' ಎಂದು ಈಶ್ವರ್ ಖಂಡ್ರೆ ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News