ಜು.7ರವರೆಗೂ ರಾಜ್ಯಾದ್ಯಂತ ಭಾರೀ ಮಳೆ ಸಾಧ್ಯತೆ

Update: 2020-07-04 17:07 GMT

ಬೆಂಗಳೂರು, ಜು 4: ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಕರಾವಳಿ ಜಿಲ್ಲೆಗಳಲ್ಲಿ ಜು.7ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ಧಾರವಾಡ, ಬೀದರ್, ಬೆಳಗಾವಿ, ರಾಯಚೂರು, ಯಾದಗಿರಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ ಪ್ರದೇಶದಲ್ಲಿ ಭಾರೀ ಮಳೆ ಮತ್ತು ಗಾಳಿ ಬೀಸುತ್ತಿದ್ದು ಮೀನುಗಾರರು ಕಡಲಿಗಿಳಿಯದಂತೆ ಎಚ್ಚರಿಕೆ ನೀಡಲಾಗಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News