ಸರಕಾರಿ ನೌಕರರಿಗೆ ಮುನ್ನೆಚ್ಚರಿಕೆ ತೆಗೆದುಕೊಳ್ಳಲು ಸುತ್ತೋಲೆ ಹೊರಡಿಸಿದ ಸರಕಾರ

Update: 2020-07-04 17:30 GMT

ಬೆಂಗಳೂರು, ಜು.4: ರಾಜ್ಯದಲ್ಲಿ ಕೊರೋನ ಸೋಂಕಿತರ ಸಂಖ್ಯೆ ದೊಡ್ಡಮಟ್ಟದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆ ರಾಜ್ಯ ಸರಕಾರ ತನ್ನ ಸರಕಾರಿ ನೌಕರರಿಗೆ ಮುನ್ನೆಚ್ಚರಿಕೆ ತೆಗೆದುಕೊಳ್ಳುವಂತೆ ಹೇಳಿದೆ.

ಇನ್ನು ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಿರುವ ಪ್ರದೇಶಗಳಲ್ಲಿ ವಾಸವಾಗಿರುವ ಸಚಿವಾಲಯದ ಅಧಿಕಾರಿಗಳು/ಸಿಬ್ಬಂದಿ ಕಚೇರಿಗೆ ಹಾಜರಾಗುವುದರಿಂದ ವಿನಾಯಿತಿ ನೀಡಲಾಗಿದೆ.

ಹೀಗೆ ವಿನಾಯಿತಿ ಪಡೆದವರು ವರ್ಕ್ ಫ್ರಮ್ ಹೋಮ್ ಮೂಲಕ ಕೆಲಸವನ್ನು ನಿರ್ವಹಿಸುವಂತೆ ರಾಜ್ಯ ಸರಕಾರ ಸೂಚಿಸಿದೆ. ಈ ಕುರಿತು ಸರಕಾರದ ಉಪ ಕಾರ್ಯದರ್ಶಿ ಎಚ್.ಎಸ್. ಚನ್ನಬಸಪ್ಪ ಪ್ರಕಟಣೆ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News