ಪುಲ್ವಾಮ: ರಸ್ತೆಯಲ್ಲಿ ಐಇಡಿ ಸ್ಫೋಟ: ಸಿಆರ್‌ಪಿಎಫ್ ಯೋಧನಿಗೆ ಗಾಯ

Update: 2020-07-05 05:57 GMT

ಶ್ರೀನಗರ,ಜು.5: ಜಮ್ಮು-ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಭಾನುವಾರ ಐಇಡಿ ಸ್ಫೋಟ ಸಂಭವಿಸಿದ್ದು,ಭದ್ರತಾ ಪಡೆಗಳು ಗಾಳಿಯಲ್ಲಿ ಗುಂಡು ಹಾರಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಭದ್ರತಾ ಪಡೆಗಳು ಪುಲ್ವಾಮದ ಗಾಂಗೂ ಪ್ರದೇಶದಲ್ಲಿ ಸಾಗುತ್ತಿದ್ದಾಗ ಸ್ಫೋಟ ಸಂಭವಿಸಿದೆ. ಸ್ಫೋಟದ ಬಳಿಕ ಭದ್ರತಾ ಪಡೆಗಳು ಗಾಳಿಯಲ್ಲಿ ಕೆಲವು ಸುತ್ತು ಗುಂಡು ಹಾರಿಸಿದ್ದಾರೆ. ಸಿಆರ್‌ಪಿಎಫ್ ಯೋಧರೊಬ್ಬರು ಗಾಯಗೊಂಡಿದ್ದಾರೆ.

ಉಗ್ರರು ಸುಧಾರಿತ ಸ್ಫೋಟ ಸಾಧಕ(ಐಇಡಿ)ಬಳಸಿ ಸ್ಪೋಟ ನಡೆಸಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತುವರಿದಿದ್ದು, ಶೋಧ ಕಾರ್ಯಾಚರಣೆ ಮುಂದುವರಿದಿದೆ.

ಕಳೆದ ನಾಲ್ಕು ದಿನಗಳಲ್ಲಿ ಸಿಆರ್‌ಪಿಎಫ್ ಯೋಧರ ಮೇಲೆ ನಡೆದಿರುವ ಎರಡನೇ ದಾಳಿ ಇದಾಗಿದೆ. ಬುಧವಾರ ಸಪೋರ್‌ನಲ್ಲಿ ಸಿಆರ್‌ಪಿಎಫ್ ಯೋಧ ಹಾಗೂ ನಾಗರಿಕರೊಬ್ಬರು ಉಗ್ರರ ಗುಂಡಿನ ದಾಳಿಯಿಂದಾಗಿ ಸಾವನ್ನಪ್ಪಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News