ಕೊರೋನ ಚಿಕಿತ್ಸೆಗೆ ಬೆಂಗಳೂರಿನ 72 ಖಾಸಗಿ ಆಸ್ಪತ್ರೆಗಳಲ್ಲಿ 3,331 ಹಾಸಿಗೆಗಳು ಮೀಸಲು: ಸಚಿವ ಡಾ.ಸುಧಾಕರ್

Update: 2020-07-05 12:07 GMT

ಬೆಂಗಳೂರು, ಜು. 5: ಬೆಂಗಳೂರು ನಗರದಾದ್ಯಂತ ಇರುವ ಒಟ್ಟು 72 ಖಾಸಗಿ ಆಸ್ಪತ್ರೆಗಳಲ್ಲಿ 3,331 ಹಾಸಿಗೆಗಳನ್ನು ಕೋವಿಡ್ ಸೋಂಕಿತರ ಚಿಕಿತ್ಸೆಗೆ ಮೀಸಲಿಡಲಾಗಿದೆ. ಶನಿವಾರ ಸಂಜೆ ವೇಳೆಗೆ ಇವುಗಳಲ್ಲಿ 733 ಹಾಸಿಗೆಗಳು ಭರ್ತಿಯಾಗಿದ್ದು, 2,598 ಹಾಸಿಗೆಗಳು ಅಂದರೆ ಸುಮಾರು ಶೇ.78ರಷ್ಟು ಹಾಸಿಗೆಗಳು ಖಾಲಿಯಿವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ರವಿವಾರ ಟ್ವೀಟ್ ಮಾಡಿರುವ ಅವರು, ನಗರದಲ್ಲಿ ಕೊರೋನ ಸೋಂಕಿತರಿಗೆ ಹಾಸಿಗೆ ಕೊರತೆ ಹಿನ್ನೆಲೆಯಲ್ಲಿ ಸೂಕ್ತ ಸಮಯಕ್ಕೆ ಚಿಕಿತ್ಸೆ ದೊರೆಯದೆ ಕೆಲವರು ಸಾವನ್ನಪ್ಪಿದ ಆರೋಪಗಳು ಕೇಳಿಬಂದಿವೆ. ಆದರೆ, ಸರಕಾರ ಕೊರೋನ ಸೋಂಕಿತರಿಗೆ ಹಾಸಿಗೆ ವ್ಯವಸ್ಥೆ ಕಲ್ಪಿಸಲು ಸಮರೋಪಾದಿಯಲ್ಲಿ ಕ್ರಮ ಕೈಗೊಂಡಿದೆ. ಯಾವುದೇ ಕಾರಣಕ್ಕೂ ಯಾರೂ ಆತಂಕಗೊಳ್ಳುವ ಅಗತ್ಯವಿಲ್ಲ ಎಂದು ಆಭಯ ನೀಡಿದ್ದಾರೆ.

ಕೋವಿಡ್ ವಿರುದ್ಧ ಈ ಹೋರಾಟದಲ್ಲಿ ಶ್ರೀಸಾಮಾನ್ಯರ ಸಂಯಮ ಮತ್ತು ಸಹಕಾರ ಅತ್ಯಂತ ನಿರ್ಣಾಯಕ. ಸೋಮವಾರ ಬೆಳಗ್ಗೆ 5ಗಂಟೆಯ ವರೆಗೂ ಜಾರಿಯಲ್ಲಿರುವ ಲಾಕ್‍ಡೌನ್ ಅನ್ನು ಶಿಸ್ತಿನಿಂದ ಪಾಲಿಸೋಣ. ಮನೆಯಲ್ಲೇ ಇರಿ, ಸುರಕ್ಷಿತವಾಗಿರಿ'

-ಡಾ.ಕೆ.ಸುಧಾಕರ್, ವೈದ್ಯಕೀಯ ಶಿಕ್ಷಣ ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News