ತಜ್ಞರ ಸಲಹೆಯ ನಿರ್ಲಕ್ಷದಿಂದ ರಾಜ್ಯದಲ್ಲಿ ಕೋವಿಡ್-19 ಹೆಚ್ಚಳ: ದಿನೇಶ್ ಗುಂಡೂರಾವ್

Update: 2020-07-05 12:19 GMT

ಬೆಂಗಳೂರು, ಜು.5: ರಾಜ್ಯದಲ್ಲಿ ಕೋವಿಡ್-19 ಪರಿಣಾಮಕಾರಿಯಾಗಿ ನಿಯಂತ್ರಿಸುವಲ್ಲಿ ತಜ್ಞರು ನೀಡಿದ ಸಲಹೆಯನ್ನು ರಾಜ್ಯ ಸರಕಾರ ನಿರ್ಲಕ್ಷ್ಯ ಮಾಡಿದ ಪರಿಣಾಮವಾಗಿ ಇವತ್ತು ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ವ್ಯಾಪಕವಾಗಿವೆ ಎಂದು ಮಾಜಿ ಸಚಿವ ದಿನೇಶ್‍ ಗುಂಡೂರಾವ್ ಆರೋಪಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿರುವ ಅವರು, ಮೇ ತಿಂಗಳಲ್ಲಿಯೇ ತಜ್ಞರ ಸಮಿತಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹಲವು ಸಲಹೆಗಳನ್ನು ನೀಡಿತ್ತು. ಇದನ್ನು ಪರಿಗಣಿಸದೆ ರಾಜ್ಯ ಸರಕಾರ ಕಾಲಹರಣ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ಒಳಗೊಂಡಂತೆ ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಕೊರೋನ ಸೋಂಕು ಹೆಚ್ಚಾಗುತ್ತಿದೆ. ರಾಜ್ಯ ಸರಕಾರ ಈಗ ಯುದ್ದಕಾಲದಲ್ಲಿ ಶಸ್ತ್ರಾಭ್ಯಾಸ ಮಾಡುತ್ತಿದೆ. ಇದಕ್ಕೆ ಪೂರಕವೆಂಬಂತೆ ಆಡಳಿತದಲ್ಲಿ ಗೊಂದಲ ಎದ್ದುಕಾಣುತ್ತಿದೆ. ಹಾಗೂ ದಿನಕ್ಕೆ ಒಬ್ಬ ಸಚಿವರ ಉಸ್ತುವಾರಿ ಬದಲಾವಣೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News