ರೈಲು ಹಳಿಗೆ ತಲೆ ಇಟ್ಟು ಯುವಕ ಆತ್ಮಹತ್ಯೆ
Update: 2020-07-05 18:07 IST
ಬಳ್ಳಾರಿ, ಜು.5: ಯುವನೋರ್ವ ರೈಲಿನ ಹಳಿ ಮೇಲೆ ಮಲಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಬಳ್ಳಾರಿ ರೈಲ್ವೇ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ತಾಲೂಕಿನ ರೂಪನಗುಡಿಯ ಒಂದನೇ ವಾರ್ಡ್ ನಿವಾಸಿ ದಾದಾಪೀರ್(26) ಎಂಬ ಯುವಕ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.
ರವಿವಾರ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಕೆಳಭಾಗದಲ್ಲಿರುವ ರೈಲ್ವೆ ಹಳಿ ಮೇಲೆ ಮಲಗಿ ದಾದಾಪೀರ್ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಜೀವನದಲ್ಲಿ ಜಿಗುಪ್ಸೆ ಹೊಂದಿ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದ ಎಂದು ಹೇಳಲಾಗುತ್ತಿದ್ದು, ಈ ಸಂಬಂಧ ಮೊಕದ್ದಮೆ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.