ಕೊರೋನ ಸೋಂಕಿಗೆ ಮೈಸೂರಿನಲ್ಲಿ ಇಬ್ಬರು ಬಲಿ: 6ಕ್ಕೆ ಏರಿದ ಸಾವಿನ ಸಂಖ್ಯೆ

Update: 2020-07-05 16:48 GMT
ಸಾಂದರ್ಭಿಕ ಚಿತ್ರ

ಮೈಸೂರು,ಜು.5: ಕೊರೋನ ಮಹಾಮಾರಿಗೆ ರವಿವಾರ ಮೈಸೂರಿನಲ್ಲಿ ಇಬ್ಬರು ಸಾವೀಗೀಡಾದ ಘಟನೆ ನಡೆದಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸಾವಿನ ಸಂಖ್ಯೆ 6ಕ್ಕೆ ಏರಿದಂತಾಗಿದೆ. 

ಕೊರೋನ ಸೊಂಕಿತ ವೃದ್ದೆ ಮತ್ತು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ. ಕೊರೋನ ಧೃಡವಾದ ಹಿನ್ನಲೆಯಲ್ಲಿ ನೂತನ ಕೋವಿಡ್-19 ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧೆ ಚಿಕಿತ್ಸೆ ಫಲಕಾರಿಯಾಗದ ಸಾವೀಗೀಡಾಗಿದ್ದಾರೆ.

ಮತ್ತೊಬ್ಬ ವೃದ್ಧ ಉಸಿರಾಟದ ತೊಂದರೆಯಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಸಹ ಸಾವನ್ನಪ್ಪಿದ್ದಾರೆ. ಕೊರೋನ ಸಾವಿನ ಸಂಖ್ಯೆ ಹೆಚ್ಚುತ್ತಿರುವುದು ಮೈಸೂರಿಗರಲ್ಲಿ ಆತಂಕ ಹೆಚ್ಚಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News