ಹಾಸನ: ಕೊರೋನ ಸೋಂಕಿಗೆ ಮತ್ತೊಂದು ಸಾವು; ಹೊಸದಾಗಿ 13 ಜನರಿಗೆ ಸೋಂಕು

Update: 2020-07-05 17:37 GMT

ಹಾಸನ, ಜು.5: ಕೊರೋನ ಸೋಂಕು ದಿನೇ ದಿನೇ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ ರವಿವಾರ 13 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಓರ್ವ ಸೋಂಕಿತ ಸಾವನ್ನಪ್ಪಿದ್ದಾರೆ.

ಅರಸೀಕೆರೆ ನಿವಾಸಿ 77 ವರ್ಷದ ವೃದ್ಧ ಕಳೆದ ರಾತ್ರಿ ಮೃತಪಟ್ಟಿದ್ದಾರೆ. ನಿಮೋನಿಯಾ, ರಕ್ತದ ಒತ್ತಡ ಸೇರಿದಂತೆ ಇತರೆ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಜುಲೈ 3 ರಂದು ಕೋವಿಡ್ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದ್ದು, ಸ್ಲ್ಯಾಬ್ ಪರೀಕ್ಷೆ ಮಾಡಿದ್ದು, ಈ ವೇಳೆ ಕೊರೋನ ಸೋಂಕು ಇರುವುದು ದೃಢಪಟ್ಟಿತ್ತು. ಚಿಕಿತ್ಸೆ ನೀಡಲಾಗುತ್ತಿದ್ದರೂ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಜಿಲ್ಲಾಡಳಿತದ ವತಿಯಿಂದ ಅಂತ್ಯಕ್ರಿಯೆ ಮಾಡಲಾಗಿದೆ. 

ಜಿಲ್ಲೆಯಲ್ಲಿ ಇಲ್ಲಿವರೆಗೂ ಕೊರೋನದಿಂದ ಒಟ್ಟು 8 ಮಂದಿ ಸಾವನ್ನಪ್ಪಿದ್ದಾರೆ. ಇಂದು ಹೊಸದಾಗಿ 13 ಸೋಂಕಿನ ಪ್ರಕರಣ ಕಾಣಿಸಿಕೊಂಡಿದೆ. ಇವರಲ್ಲಿ ಅರಸಿಕೆರೆ ತಾಲೂಕಿನಲ್ಲಿ 5, ಚನ್ನರಾಯಪಟ್ಟಣದ 1 ಪ್ರಕರಣ, ಹಾಸನದಲ್ಲಿ 7 ಪ್ರಕರಣ ಸೇರಿ ಒಟ್ಟು 13 ಪ್ರಕರಣ ಬಂದಿದೆ.

ಒಟ್ಟು 492 ಕೊರೋನ ಪಾಸಿಟಿವ್ ಪ್ರಕರಣ ದಾಖಲಾಗಿದೆ. 255 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 299 ಜನರು ಚಿಕಿತ್ಸೆ ಪಡೆಯುತ್ತಿರುವುದಾಗಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸತೀಶ್ ತಿಳಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News