×
Ad

ಸಿಬ್ಬಂದಿಗೆ ಕೋವಿಡ್-19 ದೃಢ: ಮಲ್ಲೇಶ್ವರಂ ಪೊಲೀಸ್ ಠಾಣೆ ಸೀಲ್‍ಡೌನ್

Update: 2020-07-05 23:14 IST

ಬೆಂಗಳೂರು, ಜು.5: ಪೊಲೀಸ್ ಸಿಬ್ಬಂದಿಯ ಕೋವಿಡ್-19 ಪರೀಕ್ಷೆ ನಡೆದು ಸುಮಾರು ಏಳು ದಿನಗಳ ಬಳಿಕ ವರದಿಯನ್ನು ಆರೋಗ್ಯ ಇಲಾಖೆ ನೀಡಿದ್ದು, ಓರ್ವ ಸಿಬ್ಬಂದಿಗೆ ಕೊರೋನ ಸೋಂಕು ದೃಢಪಟ್ಟಿದೆ. ಹಾಗಾಗಿ, ಇಲ್ಲಿನ ಮಲ್ಲೇಶ್ವರಂ ಪೊಲೀಸ್ ಠಾಣೆಯನ್ನು ತುರ್ತು ಸೀಲ್‍ಡೌನ್ ಮಾಡಲಾಗಿದೆ.

ಮಲ್ಲೇಶ್ವರಂ ಪೊಲೀಸ್ ಠಾಣೆಯ ಹೊಯ್ಸಳ ಸಿಬ್ಬಂದಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಇವರ ಸಂಪರ್ಕದಲ್ಲಿದ್ದ ಹಲವರನ್ನು ಕ್ವಾರಂಟೈನ್‍ಗೆ ಒಳಪಡಿಸಲಾಗಿದೆ.

ಠಾಣೆಯ ಮಹಿಳಾ ಸಿಬ್ಬಂದಿ ಸೇರಿ ಇಬ್ಬರಲ್ಲಿ ಸೋಂಕಿನ ಲಕ್ಷಣ ಇರುವ ಕಾರಣ ಜೂ. 27 ರಂದು ಕೋವಿಡ್ 19 ಪರೀಕ್ಷೆ ಮಾಡಲಾಗಿತ್ತು. ಆದರೆ, ರವಿವಾರ ವರದಿ ಕೈ ಸೇರಿದ್ದು, ಪಾಸಿಟಿವ್ ಬಂದಿದೆ. ಈಗ ಅವರ ಜತೆ ಸಂಪರ್ಕ ಹೊಂದಿದ್ದವರನ್ನು ಕ್ವಾರಂಟೈನ್ ಮಾಡಲಾಗಿದೆ.

ಪೊಲೀಸ್ ಠಾಣೆಯನ್ನು 48 ಗಂಟೆಗಳ ಕಾಲ ಸೀಲ್‍ಡೌನ್ ಮಾಡಿ, ತಾತ್ಕಾಲಿಕವಾಗಿ ಠಾಣೆಯನ್ನು ಎದುರುಗಡೆ ಇರುವ ಶಾಲೆ ಆವರಣಕ್ಕೆ ವರ್ಗಾಯಿಸಲಾಗಿದೆ. ಸೋಂಕಿತ ಸಿಬ್ಬಂದಿಯನ್ನು ನಿಗದಿತ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News