'ಫೈವ್ ಸ್ಟಾರ್ ಯಂಗ್ ಬಾಯ್ಸ್ ಅಡ್ಡೂರು' ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಉಚಿತ ಸಲಕರಣೆಗಳ ವಿತರಣೆ

Update: 2020-07-05 17:45 GMT

ಮಂಗಳೂರು: ಫೈವ್ ಸ್ಟಾರ್ ಯಂಗ್ ಬಾಯ್ಸ್ (ರಿ) ಅಡ್ಡೂರು ಇದರ ವತಿಯಿಂದ ಕೋವಿಡ್-19 ವಿರುದ್ಧ ಕೊರೋನ ಸೈನಿಕರಾಗಿ ಸೇವೆ ಸಲ್ಲಿಸುತ್ತಿರುವ ಅಡ್ಡೂರು ಗ್ರಾಮದ ಆಶಾ ಕಾರ್ಯಕರ್ತೆಯರಿಗೆ ಮಾಸ್ಕ್, ಸ್ಯಾನಿಟೈಝರ್, ಗ್ಲೌಸ್, ಮುಖ ಕವಚ ಉಚಿತವಾಗಿ ವಿತರಿಸುವ ಕಾರ್ಯಕ್ರಮ ಫೈವ್ ಸ್ಟಾರ್ ಯಂಗ್ ಬಾಯ್ಸ್ ಅಡ್ಡೂರು ಇದರ ಕಛೇರಿಯಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಫೈವ್ ಸ್ಟಾರ್ ಯಂಗ್ ಬಾಯ್ಸ್ (ರಿ) ಅಡ್ಡೂರು ಅಧ್ಯಕ್ಷರಾದ ಹಬೀಬ್ ಕಟ್ಟಪುಣಿ ವಹಿಸಿದ್ದರು.

ಆಶಾ ಕಾರ್ಯಕರ್ತೆಯಾದ ಜಯಲಕ್ಷ್ಮಿ ರವರು ಕೊರೋನ ವಿರುದ್ಧದ ಹೋರಾಟದ ಬಗ್ಗೆ ಸವಿವರವಾದ ಮಾಹಿತಿ ನೀಡಿದರು.

ಈ ಸಂದರ್ಭ ಸ್ಥಳೀಯ ಗ್ರಾಮಸ್ಥರಿಗೆ ಕೂಡ ಉಚಿತ ಮಾಸ್ಕ್ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಗ್ರಾಮದಲ್ಲಿ ಕಾರ್ಯಾಚರಿಸುವ ಆಶಾ ಕಾರ್ಯಕರ್ತೆಯರು ಹಾಗೂ ಫೈವ್ ಸ್ಟಾರ್ ಯಂಗ್ ಬಾಯ್ಸ್ (ರಿ) ಅಡ್ಡೂರು ಇದರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News