ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪರೀಕ್ಷೆ ಮುಂದೂಡಿಕೆ

Update: 2020-07-05 17:47 GMT

ಬೆಂಗಳೂರು, ಜು.5: ಕೊರೋನ ಸೋಂಕು ಭೀತಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗದಿಂದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳಿಗೆ ಜುಲೈ 7 ರಂದು ನಡೆಯಬೇಕಿದ್ದ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಕರ್ನಾಟಕ ಲೋಕಸೇವಾ ಆಯೋಗ, ಪೂರ್ವಭಾವಿ ಪರೀಕ್ಷೆಗೆ ಅಭ್ಯರ್ಥಿಗಳು ಬೆಂಗಳೂರು ಕೇಂದ್ರಕ್ಕೆ ಹೊರ ರಾಜ್ಯಗಳಿಂದ ಮತ್ತು ಬೇರೆ ಜಿಲ್ಲೆಗಳಿಂದ ಆಗಮಿಸಬೇಕಿರುವುದರಿಂದ ಸಾರಿಗೆ ಸಂಪರ್ಕ ಸಮರ್ಪಕವಾಗಿಲ್ಲದಿರುವುದರಿಂದ ಹಾಗೂ ಬೆಂಗಳೂರಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 7ರಂದು ನಿಗದಿಯಾಗಿದ್ದ ಪರೀಕ್ಷೆಯನ್ನು ಮುಂಜಾಗ್ರತಾ ಕ್ರಮವಾಗಿ ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News