ಉಳ್ಳಾಲ ನಗರ ಸಭಾ ವ್ಯಾಪ್ತಿಯಲ್ಲಿ ಸೋಮವಾರ 7 ಮಂದಿಗೆ ಕೊರೋನ ಸೋಂಕು ದೃಢ

Update: 2020-07-06 11:23 GMT

ಉಳ್ಳಾಲ: ಉಳ್ಳಾಲ ನಗರ ಸಭಾ ವ್ಯಾಪ್ತಿಯಲ್ಲಿ 7 ಮಂದಿಯಲ್ಲಿ ಕೊರೋನ ಇರುವುದು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಪೆರ್ಮನ್ನೂರು ನಿವಾಸಿ 52 ವರ್ಷದ ಮಹಿಳೆಯ ಗಂಟಲಿನ ದ್ರವ ಪರೀಕ್ಷೆಯಲ್ಲಿ ಕೊರೋನ ಪಾಸಿಟಿವ್ ಬಂದಿದೆ.

ಆಝಾದ್ ನಗರದ ಐದು ವರ್ಷದ ಹೆಣ್ಣು ಮಗು ಸೇರಿದಂತೆ 44, 17, 60 ವರ್ಷದ ಪುರುಷರಲ್ಲಿ ಕೊರೋನ ಸೋಂಕು ಇರುವುದು ದೃಢಪಟ್ಟಿದ್ದು, ಇವರಿಗೆ ಪಿ-9,590 ಪ್ರಾಥಮಿಕ ಸಂಪರ್ಕದಿಂದ ಸೋಂಕು ತಗುಲಿದೆ. ಕೋಡಿ ನಿವಾಸಿ 42 ವರ್ಷದ ಪುರುಷ, ಕಾಪಿಕಾಡ್ ನಿವಾಸಿ 28 ವರ್ಷದ ಯುವಕನಿಗೆ ಕೊರೋನ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಉಳ್ಳಾಲ ವ್ಯಾಪ್ತಿಯ ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ  ಜೂ.23 ರಿಂದ ಈವರೆಗೆ 176 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ಪೈಕಿ ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಇವರಲ್ಲಿ ಮೂವರು ಉಳ್ಳಾಲ ನಗರ ಸಭಾ ವ್ಯಾಪ್ತಿಯ ನಿವಾಸಿಗಳಾಗಿದ್ದು, ಒಬ್ಬರು ಮುನ್ನೂರು ಗ್ರಾಮದ ಸಂತೋಷ್ ನಗರದ ನಿವಾಸಿ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News