ರಾಜ್ಯದ ಸಂಸದೆಯೊಬ್ಬರಿಗೆ ಕೊರೋನ ಸೋಂಕು ದೃಢ

Update: 2020-07-06 13:14 GMT

ಬೆಂಗಳೂರು, ಜು.6: ರಾಜ್ಯದ ಸಂಸದೆಯೊಬ್ಬರಿಗೆ ಕೊರೋನ ಪಾಸಿಟಿವ್ ಬಂದಿದೆ. ಈ ಬಗ್ಗೆ ಸ್ವತಃ ಅವರೇ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

"ಇತ್ತೀಚೆಗೆ ಜುಲೈ 4ರಂದು, ನನಗೆ ಸ್ವಲ್ಪ ತಲೆನೋವು ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು ಕೊರೋನ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟಿದ್ದರಿಂದ, ಕೋವಿಡ್-19 ಪರೀಕ್ಷೆಗೆ ಒಳಗಾದೆ. ಇವತ್ತು ಪಾಸಿಟಿವ್ ಎಂದು ಫಲಿತಾಂಶ ಬಂದಿದೆ ಎಂದು" ಸಂಸದೆ ತಿಳಿಸಿದ್ದಾರೆ.

ವೈದ್ಯರ ಸಲಹೆ ಪಡೆದುಕೊಂಡು ಅಗತ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ಮನೆಯಲ್ಲಿಯೇ ಕ್ವಾರಂಟೈನ್‍ಗೆ ಒಳಪಟ್ಟಿದ್ದೀನಿ. ರೋಗನಿರೋಧಕ ಶಕ್ತಿಯು ನನ್ನಲ್ಲಿ ಪ್ರಬಲವಾಗಿದೆ ಮತ್ತು ನಿಮ್ಮ ಆಶೀರ್ವಾದ ನನ್ನ ಮೇಲೆ ಇರುವುದರಿಂದ ಬೇಗ ಗುಣಮುಖ ಆಗುತ್ತೇನೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ನನ್ನನ್ನು ಭೇಟಿಯಾದ ವ್ಯಕ್ತಿಗಳ ವಿವರವನ್ನು ಸರಕಾರಿ ಅಧಿಕಾರಿಗಳಿಗೆ ಕೊಟ್ಟಿರುವೆ. ಆದರೂ ನನ್ನನ್ನು ಭೇಟಿಯಾದವರಲ್ಲಿ ಯಾರಿಗಾದರೂ ಕೋವಿಡ್ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಪರೀಕ್ಷೆ ಮಾಡಿಸಲು ವಿನಂತಿಸುತ್ತೇನೆ. ನಿಮ್ಮ ಹಾರೈಕೆ ಇರಲಿ ಎಂದು ಸಂಸದೆ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News