ನವ್ಲಾಖಾ ಜಾಮೀನು ಅರ್ಜಿಯ ವಿಚಾರಣೆ ದಿಲ್ಲಿ ಹೈಕೋರ್ಟ್ ವ್ಯಾಪ್ತಿಗೆ ಬರುವುದಿಲ್ಲ: ಸುಪ್ರೀಂಕೋರ್ಟ್

Update: 2020-07-06 13:41 GMT

ಹೊಸದಿಲ್ಲಿ, ಜು.6: ಭೀಮಾ ಕೋರೆಗಾಂವ್ ಹಿಂಸಾಚಾರಕ್ಕೆ ಸಂಬಂಧಿಸಿ ಮಾವೋವಾದಿಗಳೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪದಡಿ ಪ್ರಕರಣ ಎದುರಿಸುತ್ತಿರುವ ಹೋರಾಟಗಾರ ಗೌತಮ್ ನವ್ಲಾಖಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ದಿಲ್ಲಿ ಹೈಕೋರ್ಟ್ ವ್ಯಾಪ್ತಿಯಡಿ ಬರುವುದಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಯುಎಪಿಎ (ಅಕ್ರಮ ಚಟುವಟಿಕೆ ತಡೆ ಕಾಯ್ದೆ)ಯಡಿ ನವ್ಲಾಖಾ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ದಿಲ್ಲಿಯ ವಿಶೇಷ ನ್ಯಾಯಾಲಯಕ್ಕೆ ವರ್ಗಾಯಿಸಬೇಕೆಂದು ರಾಷ್ಟ್ರೀಯ ತನಿಖಾ ಏಜೆನ್ಸಿಗೆ ದಿಲ್ಲಿ ಹೈಕೋರ್ಟ್ ಸೂಚಿಸಿರುವುದನ್ನು ಆಕ್ಷೇಪಿಸಿರುವ ಸುಪ್ರೀಂಕೋರ್ಟ್, ನವ್ಲಾಖಾ ಸಲ್ಲಿಸಿರುವ ಜಾಮೀನು ಅರ್ಜಿಯ ಬಗ್ಗೆ ದಿಲ್ಲಿ ಹೈಕೋರ್ಟ್ ಬದಲು ಮುಂಬೈ ಹೈಕೋರ್ಟ್ ವಿಚಾರಣೆ ನಡೆಸಬೇಕು ಎಂದು ತಿಳಿಸಿದೆ. ತಿಹಾರ್ ಜೈಲಿನಲ್ಲಿ ಬಂಧನದಲ್ಲಿರುವ ನವಲಖರನ್ನು ಹೆಚ್ಚಿನ ವಿಚಾರಣೆಗೆ ಮೇ 25ರಂದು ಮುಂಬೈಗೆ ಸ್ಥಳಾಂತರಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News