ಸಾರ್ವಜನಿಕರಿಗೆ ‘ಸೇವಾಸಿಂಧು’ ಸೇವೆ

Update: 2020-07-06 16:05 GMT

ಮಂಗಳೂರು, ಜು.6: ರಾಷ್ಟ್ರೀಯ ಇ-ಆಡಳಿತ ಹಾಗೂ ಇಡಿಸಿಎಸ್ ನಿರ್ದೇಶನಾಲಯದ ನಿರ್ದೇಶನದಂತೆ ಇ-ಜಿಲ್ಲಾ ಯೋಜನೆಯ ಸೇವಾ ಸಿಂಧು ಅಂತರ್ಜಾಲ ತಾಣವನ್ನು ಅಭಿವೃದ್ಧಿಪಡಿಸಿದ್ದು, ಸಾರ್ವಜನಿಕರು ಸುಲಭವಾಗಿ ಬಳಕೆ ಮಾಡಿಕೊಳ್ಳಬಹುದಾಗಿದೆ.

ಇದರಲ್ಲಿ ವಿವಿಧ ಇಲಾಖೆಗಳ 451 ಸೇವೆಗಳು ಲಭ್ಯ ಇವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 240 ಸಿ.ಎಸ್.ಸಿ. ಕೇಂದ್ರಗಳಿವೆ. ಕೊರೋನ ಅವಧಿಯಲ್ಲಿ ಸಾರ್ವಜನಿಕರು ನೇರವಾಗಿ ಸರಕಾರಿ ಕಚೇರಿಗಳಿಗೆ ಭೇಟಿ ನೀಡುವ ಬದಲು ಸೇವಾ ಸಿಂಧು ಆನ್ ಲೈನ್ ಸೇವೆ ಬಳಸಿಕೊಳ್ಳಬಹುದಾಗಿದೆ. ಸಾರ್ವಜನಿಕರು ಸರಕಾರದ ಸೇವೆಗಳನ್ನು ಸೇವಾಸಿಂಧು ವೆಬ್ ಸೈಟ್ ಮೂಲಕ ಅಥವಾ ಸಮೀಪದ ಸಿ.ಎಸ್.ಸಿ. ಕೇಂದ್ರಗಳಲ್ಲೂ ಪಡೆದುಕೊಳ್ಳಬಹುದು.

ಮುಂದಿನ ದಿನಗಳಲ್ಲಿ ಸಕಾಲ ಯೋಜನೆಯಡಿ ಬರುವ ಎಲ್ಲ ಸೇವೆಗಳು ಸೇವಾಸಿಂಧು ಅಡಿ ಲಭ್ಯವಾಗಲಿದೆ. ಸಾರ್ವಜನಿಕರು ಸಲ್ಲಿಸಿದ ಅರ್ಜಿಯ ಸ್ಥಿತಿಗತಿಗಳನ್ನು (www.sakala.kar.nic.in)  ವೆಬ್‌ಸೈಟ್ ಮೂಲಕ ಪರಿಶೀಲಿಸಬಹುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News